LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ALERT : ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿ 25 ಲಕ್ಷ ರೂ. ಕಳ್ಳತನ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್..!

ಬೆಂಗಳೂರು : ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ನಗದು ಡ್ರಾ ಮಾಡಿ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಈ ವಿಷಯವನ್ನು ಗಮನಿಸಿದ್ದ ದಂಪತಿ, ಹಣವನ್ನು ಕಳವು ಮಾಡುವ ಸಂಚು ರೂಪಿಸಿ, ಸೂಕ್ತ ಸಮಯದಲ್ಲಿ ನಗದನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದರು.

ತನಿಖೆಯಲ್ಲಿ ಆರೋಪಿಗಳು ಮನೆಗೆ ಕೆಲಸಕ್ಕೆ ಸೇರುವ ಮೊದಲೇ ಕಳ್ಳತನದ ಉದ್ದೇಶ ಹೊಂದಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿನ ಹಣದ ವ್ಯವಹಾರ ಹಾಗೂ ನಗದು ಇಡುವ ಸ್ಥಳದ ಕುರಿತು ಮಾಹಿತಿ ಸಂಗ್ರಹಿಸಿ ಕೃತ್ಯ ಎಸಗಿರುವುದು ತಿಳಿದುಬಂದಿದೆ.

ಪ್ರಕರಣ ಬೆಳಕಿಗೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಮೃತಹಳ್ಳಿ ಪೊಲೀಸರು, ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಲ್ಲದೆ, ಕಳುವಾಗಿದ್ದ 25 ಲಕ್ಷ ರೂಪಾಯಿ ನಗದನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?