LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ALERT : ‘ಆನ್‌ಲೈನ್‌’ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್; ಈ 6 ಡಿಜಿಟಲ್ ಲೋನ್ ಆ್ಯಪ್‌ಗಳನ್ನು ನಿಷೇಧಿಸಿದ ಕೇಂದ್ರ!

ಲೋನ್ ಆ್ಯಪ್‌ಗಳನ್ನು ಬಳಸುವವರಿಗೆ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದೆ. ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಲವು ಡಿಜಿಟಲ್ ಲೋನ್ ಆ್ಯಪ್‌ಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಆರು ಲೋನ್ ಆ್ಯಪ್‌ಗಳನ್ನು ನಿಷೇಧಿಸಿ, ಅವುಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕುವಂತೆ ಆದೇಶಿಸಿದೆ.

ಬ್ಯಾಂಕ್‌ಗಳಿಂದ ಸಾಲ ಪಡೆಯಬೇಕಾದರೆ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವುದು ಅಗತ್ಯ. ಸಾಮಾನ್ಯವಾಗಿ 750ಕ್ಕಿಂತ ಹೆಚ್ಚಿನ ಕ್ರೆಡಿಟ್ ಸ್ಕೋರ್ ಇದ್ದರೆ ಸಾಲ ಪಡೆಯುವ ಸಾಧ್ಯತೆ ಉತ್ತಮವಾಗಿರುತ್ತದೆ. ಸ್ಕೋರ್ ಕಡಿಮೆ ಇದ್ದರೆ ಬ್ಯಾಂಕ್‌ಗಳು ಸಾಲದ ಅರ್ಜಿಯನ್ನು ತಿರಸ್ಕರಿಸುವ ಸಾಧ್ಯತೆ ಇದೆ. ಹೀಗಾಗಿ ತುರ್ತಾಗಿ ಹಣದ ಅಗತ್ಯವಿರುವ ಕೆಲವರು ಡಿಜಿಟಲ್ ಲೋನ್ ಆ್ಯಪ್‌ಗಳ ಮೊರೆ ಹೋಗುತ್ತಿದ್ದಾರೆ.

ಆದರೆ ಕೆಲವು ಲೋನ್ ಆ್ಯಪ್‌ಗಳು ಹೆಚ್ಚಿನ ಬಡ್ಡಿ ದರದ ಜೊತೆಗೆ ಭಾರಿ ಪ್ರೊಸೆಸಿಂಗ್ ಶುಲ್ಕವನ್ನೂ ವಸೂಲಿ ಮಾಡುತ್ತಿವೆ. ಸಾಲ ಪಡೆದ ನಂತರ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡದಿದ್ದರೆ ಕಿರುಕುಳ, ಬೆದರಿಕೆ ಹಾಗೂ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ. ಸಾಲ ನೀಡುವ ಸಂದರ್ಭದಲ್ಲಿ ಕಡಿಮೆ ಬಡ್ಡಿ ದರವನ್ನು ತೋರಿಸಿ, ಸಾಲ ಪಡೆದ ನಂತರ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿರುವ ಆ್ಯಪ್‌ಗಳೂ ಇವೆ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಆರು ಲೋನ್ ಆ್ಯಪ್‌ಗಳ ವಿರುದ್ಧ ಕ್ರಮ

ನಿಯಮ ಉಲ್ಲಂಘಿಸುತ್ತಿರುವ ಡಿಜಿಟಲ್ ಲೋನ್ ಆ್ಯಪ್‌ಗಳ ವಿರುದ್ಧ ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಇದೀಗ ಮತ್ತಷ್ಟು ಆರು ಲೋನ್ ಆ್ಯಪ್‌ಗಳನ್ನು ನಿಷೇಧಿಸಲಾಗಿದೆ.ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C), ಗೂಗಲ್‌ಗೆ ಮಹತ್ವದ ಸೂಚನೆ ನೀಡಿದೆ. ಪ್ಲೇ ಸ್ಟೋರ್‌ನಲ್ಲಿರುವ LoanOrbit, Hisaab, Nexus Loan, One Fund, Credit Factor ಮತ್ತು Mobile Credit Prairie ಎಂಬ ಆರು ಲೋನ್ ಆ್ಯಪ್‌ಗಳ ಪ್ರವೇಶವನ್ನು ತೆಗೆದುಹಾಕುವಂತೆ ಆದೇಶಿಸಿದೆ.

ತುರ್ತಾಗಿ ಸಾಲದ ಅಗತ್ಯವಿರುವ ಗ್ರಾಹಕರನ್ನು ಗುರಿಯಾಗಿಸಿಕೊಂಡು ಈ ಆ್ಯಪ್‌ಗಳು ವಂಚನೆ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಆ್ಯಪ್‌ಗಳಿಗೆ ಸಂಬಂಧಿಸಿದ URLಗಳನ್ನು ತೆಗೆದುಹಾಕುವಂತೆ ಅಥವಾ ಅವುಗಳ ಪ್ರವೇಶವನ್ನು ಸ್ಥಗಿತಗೊಳಿಸುವಂತೆ ಗೂಗಲ್‌ಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ ಮೂರು ಗಂಟೆಗಳೊಳಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಇದರ ಪರಿಣಾಮವಾಗಿ ಈ ಆ್ಯಪ್‌ಗಳ ಸೇವೆಗಳು ಸ್ಥಗಿತಗೊಂಡಿವೆ.

ಗೂಗಲ್‌ಗೆ ಕೇಂದ್ರದ ಮಹತ್ವದ ಸೂಚನೆ

ಸಾಲ ಮಂಜೂರು ಮಾಡುವಾಗ ಕಡಿಮೆ ಬಡ್ಡಿ ದರವನ್ನು ತೋರಿಸಿ, ಸಾಲದ ಹಣವನ್ನು ವಿತರಿಸಿದ ನಂತರ ಅಸಲು ಮೊತ್ತದ ಮೇಲೆ ಹೆಚ್ಚಿನ ಬಡ್ಡಿ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ.ಅಷ್ಟೇ ಅಲ್ಲದೆ, ಈ ಆ್ಯಪ್‌ಗಳ ಮೂಲಕ ಆಧಾರ್ ಕಾರ್ಡ್ ವಿವರಗಳು, ಹಣಕಾಸು ಮಾಹಿತಿಯಂತಹ ವೈಯಕ್ತಿಕ ಮಾಹಿತಿಯ ಜೊತೆಗೆ ಮೊಬೈಲ್ ಕಾಂಟ್ಯಾಕ್ಟ್‌ಗಳು, ಗ್ಯಾಲರಿ, ಕ್ಯಾಮೆರಾ ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಗೂಗಲ್ ಮೂಲಕ ಜಾಹೀರಾತುಗಳನ್ನು ನೀಡಿ ಗ್ರಾಹಕರನ್ನು ಆಕರ್ಷಿಸುತ್ತಿರುವುದೂ ಪತ್ತೆಯಾಗಿದೆ. ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ನಿಯಮಗಳಿಗೆ ವಿರುದ್ಧವಾಗಿ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಆ್ಯಪ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ತೆಗೆದುಹಾಕುವಂತೆ ಆದೇಶಿಸಲಾಗಿದೆ.ಡಿಜಿಟಲ್ ಲೋನ್ ಆ್ಯಪ್ ಬಳಸುವ ಮುನ್ನ ಅದರ ವಿಶ್ವಾಸಾರ್ಹತೆ, ಬಡ್ಡಿ ದರ, ಪ್ರೊಸೆಸಿಂಗ್ ಶುಲ್ಕ, ಅನುಮತಿಗಳು ಹಾಗೂ ಸಾಲದ ನಿಯಮಗಳನ್ನು ಸಂಪೂರ್ಣವಾಗಿ ಪರಿಶೀಲಿಸುವುದು ಅತ್ಯಂತ ಮುಖ್ಯ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ