LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ALERT : ಪೋಷಕರೇ ಎಚ್ಚರ : ಆಟ ಆಡುತ್ತಾ LED ಲೈಟ್ ನುಂಗಿದ 8 ತಿಂಗಳ ಮಗು.!

ಮಡಿಕೇರಿ: ಆಟವಾಡುತ್ತಿದ್ದ ವೇಳೆ ಎಲ್‌ಇಡಿ ಬಲ್ಬ್ ನುಂಗಿದ 8 ತಿಂಗಳ ಮಗುವನ್ನು ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.ಆಟವಾಡುತ್ತಿದ್ದ ವೇಳೆ ಎಲ್‌ಇಡಿ ಬಲ್ಬ್ ನುಂಗಿದ 8 ತಿಂಗಳ ಮಗು ಪ್ರಾಣಾಪಾಯಕ್ಕೆ ಸಿಲುಕಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಎಲ್‌ಇಡಿ ಬಲ್ಬ್ ಅನ್ನು ಯಶಸ್ವಿಯಾಗಿ ಹೊರತೆಗೆದು ಜೀವ ಉಳಿಸಲಾಗಿದೆ.

ಎಲ್‌ಇಡಿ ಬಲ್ಬ್ ನುಂಗಿದ ಕೂಡಲೇ ಮಗು ನಿರಂತರವಾಗಿ ಅಳುತ್ತಿದ್ದುದನ್ನು ಗಮನಿಸಿದ ಪೋಷಕರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರಂಭದಲ್ಲಿ ಮಗುವಿನ ಗಂಟಲಿನಲ್ಲಿ ಏನಾದರೂ ಸಿಲುಕಿರುವ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್‌-ರೇ ಹಾಗೂ ಸ್ಕ್ಯಾನಿಂಗ್ ನಡೆಸಿದರು.

ಪರಿಶೀಲನೆ ವೇಳೆ ಗಂಟಲಿನಲ್ಲಿ ಸಣ್ಣ ಲೋಹದ ವಸ್ತು ಕಂಡುಬಂದಿದ್ದು, ಮಗು ಪಿನ್ ನುಂಗಿರಬಹುದು ಎಂದು ಪೋಷಕರು ಶಂಕೆ ವ್ಯಕ್ತಪಡಿಸಿದ್ದರು. ಬಳಿಕ ವೈದ್ಯರು ಲ್ಯಾರಿಂಗೋಸ್ಕೋಪಿ (Laryngoscopy) ನಡೆಸಿದಾಗ, ಮಗುವಿನ ಗಂಟಲಿನಲ್ಲಿ ಎಲ್‌ಇಡಿ ಲೈಟ್ (ಬಲ್ಬ್) ಸಿಲುಕಿರುವುದು ಪತ್ತೆಯಾಯಿತು.ತಕ್ಷಣ ಕಾರ್ಯಾಚರಣೆ ನಡೆಸಿದ ಇಎನ್‌ಟಿ ತಜ್ಞೆ ಡಾ. ರಾಜಶ್ರೀ ಹಾಗೂ ಡಾ. ಖುಶ್ವಂತ್ ನೇತೃತ್ವದ ವೈದ್ಯರ ತಂಡವು ಎಲ್‌ಇಡಿ ಬಲ್ಬ್ ಅನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. ಸಮಯೋಚಿತವಾಗಿ ಆಸ್ಪತ್ರೆಗೆ ಕರೆತಂದ ಪೋಷಕರು ಹಾಗೂ ವೈದ್ಯರ ತ್ವರಿತ ಚಿಕಿತ್ಸೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಸಣ್ಣ ಮಕ್ಕಳ ಕೈಗೆ ಸಿಗುವ ಅಪಾಯಕಾರಿ ವಸ್ತುಗಳ ಬಗ್ಗೆ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!