LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಅಲ್ಲಿ 15 ಲಕ್ಷ ಸಸಿ ನೆಡುತ್ತಿದ್ದಾರೆ; ಇಲ್ಲಿ 10 ಲಕ್ಷ ಸಸಿ ಕಡಿಸುತ್ತಿದ್ದಾರೆ: ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಬಿಡದಿ ಟೌನ್ ಶಿಪ್ ವಿಚಾರವಾಗಿ ಒಂದೆಡೆ ಹಲವು ರೈತರು ಪರವಾಗಿ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೆ ಹಲವು ರೈತರು ಟೌನ್ ಶಿಪ್ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕೇಂದ್ರ ಸಚಿವ್ ಹೆಚ್.ಡಿ.ಕುಮಾರಸ್ವಾಮಿ ತಾವು ಹೇಳಿದಂತೆ ಇಂದು ಬೈರಮಂಗಲಕ್ಕೆ ಆಗಮಿಸಿದ್ದು, ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಬೈರಮಂಗಲಕ್ಕೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ, ಮೊದಲಿಗೆ ಟೌನ್ ಶಿಪ್ ಪರವಾಗಿ ಪ್ರತಿಭಟಿಸುತ್ತಿರುವ ರೈತರತ್ತ ಕೈಸನ್ನೆ ಮಾಡಿ ಮುಂದೆ ಸಾಗಿದ್ದಾರೆ. ಟೌನ್ ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು. ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಕೇಮ್ಪೇಗೌಡ ಬಡಾವಣೆಯಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಇಲ್ಲಿ 10 ಲಕ್ಷ ಸಸಿಗಳನ್ನು ಕಡಿಸುತ್ತಿದ್ದಾರೆ. ಬಿಡದಿ ಟೌನ್ ಶಿಪ್ ಗಾಗಿ ರೈತರ ಅಡಿಕೆ, ತೆಂಗಿನ ಮರಗಳನ್ನು ಕಡಿಯಲಾಗುತ್ತಿದೆ. ಅಲ್ಲಿ ಸಸಿಗಳನ್ನು ನೆಟ್ಟು ಇಲ್ಲಿ ಸಸಿಗಳನ್ನು ಕಡಿದು ರೈತರ ಹೊಟ್ಟೆ ಮೇಲೆ ಹೊಡೆದರೆ ಏನು ಬಂತು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಕೇವಲ ಸಸಿನಡುವುದಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸವಾಗಬೇಕು ಎಂದರು. ಟೌನ್ ಶಿಪ್ ವಿರೋಧಿಸಿ ರೈತರು 480 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯರು, ವೃದ್ಧರು ಸೇರಿದಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪೂರ್ವಜರ ಕಾಲದಿಂದ ಇರುವ ಜಮೀನು, ಆಸ್ತಿ ಉಳಿಸಿಕೊಳ್ಳಬೇಕೆಂದು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಆದರೆ ರೈತರ ಸಂಕಷ್ಟದ ಕೂಗು ಮುಖ್ಯಮಂತ್ರಿಗಳಿಗೆ ಕೇಳುತ್ತಿಲ್ಲ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೆ. ಸಿಎಂ ಅವರನ್ನು ಬೀದಿಯಲ್ಲಿ ನಿಲ್ಲಿಸಬೇಕೆಂಬ ಉದ್ದೇಶವಿಲ್ಲ. ಬಾಧಿತ ರೈತರ ಜೊತೆ ಮುಕ್ತವಾಗಿ ಚರ್ಚೆ ನಡೆಸಲಿ, ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಲಿ ಎಂದು ಆಹ್ವಾನಿಸಿದ್ದೆ. ಆದರೆ ಈವರೆಗೆ ಮುಖ್ಯಮಂತ್ರಿಗಳಿಂದ ಯಾವುದೇ ಉತ್ತರವಿಲ್ಲ ಎಂದು ಗುಡುಗಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ