LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಮಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ: ಸೆ. 17ಕ್ಕೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ

ಮಂಗಳೂರು: ಕರಾವಳಿ ಭಾಗದಲ್ಲಿ ಅತ್ಯಂತ ಪ್ರಥಮ ಬಾರಿಗೆ ಆಯೋಜನೆಯಾಗಿರುವ ರಾಜ್ಯ ಸಚಿವ ಸಂಪುಟ ಸಭೆಗೆ ದಿನಗಣನೆ ಆರಂಭಗೊಂಡಿದ್ದು, ಸೆಪ್ಟೆಂಬರ್ 18 ರಂದು ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 17 ರ ಸಂಜೆಯೇ ಕರಾವಳಿ ನಗರಿಗೆ ಆಗಮಿಸಲಿದ್ದಾರೆ. ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಹಲವು ಪ್ರಮುಖ ಘೋಷಣೆಗಳು ಹೊರಬೀಳುವ ಸಾಧ್ಯತೆಯಿದ್ದು, ಸಾರ್ವಜನಿಕರಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ.

ಮುಖ್ಯಮಂತ್ರಿಗಳ ಅಧಿಕೃತ ಪ್ರವಾಸ ವೇಳಾಪಟ್ಟಿಯಂತೆ, ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 16 ರಂದು ಸಂಜೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ, ಅಂದರೆ ಸೆಪ್ಟೆಂಬರ್ 17 ರ ಗುರುವಾರ ಬೆಳಗ್ಗೆ ಕಲಬುರಗಿಯಲ್ಲಿ ನಡೆಯಲಿರುವ 'ಕಲ್ಯಾಣ ಕರ್ನಾಟಕ ಉತ್ಸವ'ದಲ್ಲಿ ಧ್ವಜಾರೋಹಣ ನೆರವೇರಿಸಿ, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅದರ ಬಳಿಕ ಅಫಜಲಪುರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳು, ಸಂಜೆ 4:10 ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 5:25 ಕ್ಕೆ ಬಜಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅವರು, ಅಂದು ರಾತ್ರಿ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿ ಮಾರನೇ ದಿನ ನಡೆಯುವ ಸಚಿವ ಸಂಪುಟ ಸಭೆಯ ನೇತೃತ್ವ ವಹಿಸಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್