LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಮಹರ್ಷಿ ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು: ಅ.26ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 2026ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆ ಹಾಗೂ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದ ಬದಲಾಗಿ, ಅಕ್ಟೋಬರ್ 26ರ ಸೋಮವಾರದಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲು ಹಾಗೂ ಅಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ನೀಡಲು ತೀರ್ಮಾನಿಸಲಾಗಿದೆ.

ಭಾನುವಾರದ ಬದಲಿಗೆ ಸೋಮವಾರ ರಜೆ

ಸರ್ಕಾರವು 2025ರ ನವೆಂಬರ್ 17ರಂದು ಪ್ರಕಟಿಸಿದ್ದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 25ರ ಭಾನುವಾರದಂದು ಘೋಷಿಸಲಾಗಿತ್ತು. ಆದರೆ, ಶೀಗಿ ಹುಣ್ಣಿಮೆಯು ಅಕ್ಟೋಬರ್ 26ರ ಸೋಮವಾರ ಬರುತ್ತಿರುವ ಹಿನ್ನೆಲೆಯಲ್ಲಿ, ಅಂದೇ ವಾಲ್ಮೀಕಿ ಜಯಂತಿಯನ್ನು ಆಚರಿಸಲು ಮತ್ತು ಆ ದಿನವನ್ನು ಅಧಿಕೃತ ಸಾರ್ವತ್ರಿಕ ರಜೆಯನ್ನಾಗಿ ಪರಿಷ್ಕರಿಸಿ ಆದೇಶಿಸಲಾಗಿದೆ.

ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯಡಿಯೂ ರಜೆ ಅನ್ವಯ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ರವಿಕುಮಾರ್ ಎಸ್. ಅವರು ರಾಜ್ಯಪಾಲರ ಆಜ್ಞಾನುಸಾರ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

1881ರ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್.ಐ) ಕಾಯ್ದೆಯ 25ನೇ ಸೆಕ್ಷನ್‌ನಲ್ಲಿರುವ ವಿವರಣೆಯನ್ವಯವೂ ಅಕ್ಟೋಬರ್ 26ರಂದು ಸಾರ್ವತ್ರಿಕ ರಜೆ ಅನ್ವಯವಾಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳು ಹಾಗೂ ಬ್ಯಾಂಕುಗಳಿಗೆ ರಜೆ ಇರಲಿದೆ.

news_1791206646_0_776.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್