LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಗೃಹಲಕ್ಷ್ಮೀ ಯೋಜನೆಗೆ ಮೇಜರ್ ಸರ್ಜರಿ: 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಟ್ಟ ಸರ್ಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮೂಲಕ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪರಿಷ್ಕರಣೆ ಆರಂಭವಾದ ಬೆನ್ನಲ್ಲೇ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಇವರು ಗೃಹಲಕ್ಷ್ಮೀ ಯೋಜನೆಗೆ ಅನರ್ಹ ಎಂದು ಗುರುತಿಸಲಾಗಿದೆ.

ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ಅವರ ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಿದೆ. ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ ಮತ್ತು GST ಪಾವತಿಸುವ 1.94 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ. ಜೊತೆಗೆ, ಮೃತಪಟ್ಟ 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿದ್ದ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದ್ದು, ಅಂತಹ ಖಾತೆಗಳಿಗೆ ಸಹ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಅನರ್ಹ ಫಲಾನುಭವಿಗಳ ಪೈಕಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 47,871 ಗೃಹಲಕ್ಷ್ಮಿಯರನ್ನ ಕೈಬಿಡಲಾಗಿದೆ. ತದನಂತರ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆ ಅನರ್ಹರ ಪರಿಷ್ಕರಣೆಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿವೆ.

ಮಾರ್ಚ್ ತಿಂಗಳಲ್ಲೇ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ವಿವಿಧ ಸರ್ಕಾರಿ ದತ್ತಾಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಈ ಪರಿಷ್ಕರಣೆ ಕೈಗೊಂಡಿದೆ. ಅನರ್ಹರಿಗೆ ಹಣ ಪಾವತಿಯಾಗುವುದನ್ನು ತಡೆಯುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲೂ ಸಿದ್ಧತೆ ನಡೆಸಿದೆ. ಈ ಕ್ರಮದಿಂದ ತಾಂತ್ರಿಕ ಲೋಪಗಳು ಮತ್ತು ನಕಲಿ ಫಲಾನುಭವಿಗಳ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂ. ಉಳಿತಾಯವಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ