LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ರಾಜ್ಯಾದ್ಯಂತ ಬರೋಬ್ಬರಿ 4.75 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಪಡಿತರ ಅಕ್ಕಿ, ಲಾರಿ ವಶಕ್ಕೆ!

ಬೆಂಗಳೂರು: ರಾಜ್ಯದಲ್ಲಿ ಬಡವರಿಗಾಗಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದವರ ವಿರುದ್ಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಕಠಿಣ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಾಳಿ ಮತ್ತು ತಪಾಸಣೆಗಳ ವೇಳೆ ಒಟ್ಟು 5,64,992 ಕೆಜಿ ಅಕ್ರಮ ಪಡಿತರ ಅಕ್ಕಿ ಹಾಗೂ ಸಾಗಣೆಗೆ ಬಳಸುತ್ತಿದ್ದ 24 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯ ಮೌಲ್ಯ ರೂ. 1.34 ಕೋಟಿ ಹಾಗೂ ವಾಹನಗಳ ಮೌಲ್ಯ ರೂ. 3.41 ಕೋಟಿಯಷ್ಟಾಗಿದ್ದು, ಒಟ್ಟು ರೂ. 4,75,93,033 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಣ್ಣದ ಪ್ಯಾಕೆಟ್‌ಗಳಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ 71,800 ಕೆಜಿ ಅಕ್ಕಿ ಮತ್ತು 3 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಲಕರಾದ ರತನ್ ಬಬನ್ ಸದಾನಂದೆ, ವಿಜಯನಾರಾಯಣ್ ಭೋಸ್ಥೆ ಹಾಗೂ ಮಹಮ್ಮದ್ ರಫೀಕ್ ಅತ್ತಾರ್ ವಿರುದ್ಧ ನಿಪ್ಪಾಣಿ ಗ್ರಾಮೀಣ ಮತ್ತು ಮಾಳಮಾರುತಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹಾಗೆಯೇ, ವಿಜಯಪುರದ ಜಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35,392 ಕೆಜಿ ಅಕ್ಕಿ ಹಾಗೂ ಲಾರಿಯನ್ನು ಜಪ್ತಿ ಮಾಡಲಾಗಿದ್ದು, ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.

ಇನ್ನು ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ತಮಿಳುನಾಡಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 35,000 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಶ್ರೀ ಅನ್ನಪೂರ್ಣೇಶ್ವರಿ ಎಂಟರ್‌ಪ್ರೈಸಸ್‌ ಮಾಲೀಕರು, ಮಧ್ಯಪ್ರದೇಶದ ಸೇಲರ್ ಎಕ್ಸ್‌ಪೋರ್ಟ್ಸ್ ಲಿಮಿಟೆಡ್ ಮಾಲೀಕರು ಹಾಗೂ ಲಾರಿ ಚಾಲಕರು ಸೇರಿದಂತೆ ಒಟ್ಟು 4 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಲ್ಲದೆ, ಕಾಗವಾಡದ ಲೋಕೂರು ಗ್ರಾಮದ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಅಕ್ಕಿ ಗಿರಣಿ ಮೇಲೆ ಕೃಷಿ ಮಾರಾಟ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಬೃಹತ್ ದಾಳಿ ನಡೆಸಲಾಗಿದೆ. ಈ ವೇಳೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಬರೋಬ್ಬರಿ 4,22,800 ಕೆಜಿ ಪಡಿತರ ಅಕ್ಕಿ ಹಾಗೂ 19 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬಂಧಿತ ಗೋದಾಮನ್ನು ಸೀಜ್ ಮಾಡಲಾಗಿದೆ. ಒಟ್ಟಾರೆ ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಲಾಖೆಯು ಒಟ್ಟು 9 ಜನರ ವಿರುದ್ಧ ಕಾನೂನು ಕ್ರಮ ಜರುಗಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್