LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ: ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಚಿವ ಎಂ.ಬಿ.ಪಾಟೀಲ್ ಪರಿಹಾರ ಘೋಷಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮೇ 14ರ ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಸಚಿವ ಎಂ.ಬಿ ಪಾಟೀಲ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಘಟನೆ ಸಂಬಂಧ ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಕುಟುಂಬದವರು ತಮ್ಮ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಬಿರುಗಾಳಿ ಮಳೆಗೆ ದುರಂತ ಸಂಭವಿಸಿದೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?