LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಫುಟ್‌ಪಾತ್‌ನಲ್ಲಿ ಬೈಕ್ ಓಡಿಸಿದರೆ ₹5,000 ದಂಡ: ಸರ್ಕಾರದಿಂದ ಕಠಿಣ ನಿಯಮ ಜಾರಿಗೆ ಸಿದ್ಧತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಿತಿಮೀರುತ್ತಿರುವ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಹಾಗೂ ಸಾರ್ವಜನಿಕರ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಅತ್ಯಂತ ಕಠಿಣ ಹೆಜ್ಜೆಗಳನ್ನು ಇಡಲು ಮುಂದಾಗಿದೆ. ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭಾಗವಾಗಿ 'ಅಂಕ ಆಧಾರಿತ ಚಾಲನಾ ಪರವಾನಗಿ' (ಪಾಯಿಂಟ್ ಬೇಸ್ಡ್ ಡಿಎಲ್) ವ್ಯವಸ್ಥೆ ಜಾರಿಗೊಳಿಸಲು ಗಂಭೀರ ಚಿಂತನೆ ನಡೆಸಿದೆ.

ವಿಕಾಸಸೌಧದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಗೃಹ ಮತ್ತು ಸಾರಿಗೆ ಇಲಾಖೆಗಳ ಉನ್ನತ ಮಟ್ಟದ ಜಂಟಿ ಸಭೆ ನಡೆಯಿತು. ಈ ಮಹತ್ವದ ಸಭೆಯಲ್ಲಿ ಡಿಜಿ-ಐಜಿಪಿ, ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಸಾರಿಗೆ ಅಧಿಕಾರಿಗಳು ಭಾಗವಹಿಸಿದ್ದು, ಸಂಚಾರ ನಿಯಮ ಉಲ್ಲಂಘನೆ ತಡೆ ಹಾಗೂ ಬಾಕಿ ದಂಡ ವಸೂಲಾತಿಯ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ಏನಿದು ಪಾಯಿಂಟ್ ಬೇಸ್ಡ್ ಸಿಸ್ಟಮ್?

ನೂತನ ಪ್ರಸ್ತಾವನೆಯ ಪ್ರಕಾರ, ವಾಹನ ಸವಾರರು ಮಾಡುವ ಪ್ರತಿಯೊಂದು ಸಂಚಾರ ನಿಯಮ ಉಲ್ಲಂಘನೆಗೂ ನಿರ್ದಿಷ್ಟ ನೆಗೆಟಿವ್ ಅಂಕಗಳನ್ನು (Points) ನಿಗದಿಪಡಿಸಲಾಗುತ್ತದೆ. ಸಿಗ್ನಲ್ ಜಂಪ್, ಅತಿವೇಗ, ಒನ್‌ವೇ ಸಂಚಾರ ಮುಂತಾದ ತಪ್ಪುಗಳನ್ನು ಪುನರಾವರ್ತಿಸಿ ಒಂದು ನಿರ್ದಿಷ್ಟ ಮಿತಿಯ ಅಂಕಗಳನ್ನು ತಲುಪಿದರೆ ಅಂತಹ ಚಾಲಕರ ಡ್ರೈವಿಂಗ್ ಲೈಸೆನ್ಸ್ (DL) ಅನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತದೆ ಅಥವಾ ಶಾಶ್ವತವಾಗಿ ರದ್ದುಗೊಳಿಸಲಾಗುತ್ತದೆ. ಈ ವ್ಯವಸ್ಥೆಯನ್ನು ಕಾನೂನುಬದ್ಧವಾಗಿ ಅನುಷ್ಠಾನಕ್ಕೆ ತರಲು ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ಕುರಿತು ಸಭೆಯಲ್ಲಿ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯಿತು.

ದಂಡ ಕಟ್ಟದಿದ್ದರೆ ವಾಹನ ಜಪ್ತಿ, ಬ್ಲ್ಯಾಕ್‌ಲಿಸ್ಟ್ ಭೀತಿ

ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ದಂಡ ಪಾವತಿಸದೆ ನಿರ್ಲಕ್ಷ್ಯ ವಹಿಸಿರುವ ವಾಹನ ಸವಾರರನ್ನು ವಿಶೇಷವಾಗಿ ಗುರುತಿಸಿ ಶಿಸ್ತುಕ್ರಮ ಜರುಗಿಸಲು ನಿರ್ಧರಿಸಲಾಗಿದೆ. ಬಾಕಿ ಇರುವ ದಂಡವನ್ನು ಕಡ್ಡಾಯವಾಗಿ ವಸೂಲಿ ಮಾಡುವುದು, ನಿಯಮ ಉಲ್ಲಂಘಿಸಿದ ವಾಹನಗಳನ್ನು ರಸ್ತೆಯಲ್ಲೇ ತಡೆಹಿಡಿಯುವುದು ಅಥವಾ ಅಂತಹ ವಾಹನಗಳನ್ನು ಕಪ್ಪು ಪಟ್ಟಿಗೆ (Blacklist) ಸೇರಿಸುವ ಕುರಿತು ತೀವ್ರ ಪರಿಶೀಲನೆ ನಡೆಸಲಾಯಿತು. ದಂಡ ಪಾವತಿಸದ ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUC) ಸಿಗದಂತೆ ನಿರ್ಬಂಧ ವಿಧಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ.

ಫುಟ್‌ಪಾತ್ ಮೇಲೆ ಬೈಕ್ ಓಡಿಸಿದರೆ ₹5,000 ದಂಡ!

ಪಾದಚಾರಿಗಳ ಜೀವಕ್ಕೆ ಅಪಾಯ ತರುವಂತೆ ಫುಟ್‌ಪಾತ್ ಮೇಲೆ ದ್ವಿಚಕ್ರ ವಾಹನ ಚಲಾಯಿಸುವ ಸವಾರರಿಗೆ ಬಿಸಿ ಮುಟ್ಟಿಸಲು ಭಾರೀ ದಂಡ ವಿಧಿಸಲು ಸಾರಿಗೆ ಮತ್ತು ಗೃಹ ಇಲಾಖೆಗಳು ತೀರ್ಮಾನಿಸಿವೆ. ಪ್ರಸ್ತುತ ಫುಟ್‌ಪಾತ್ ರೈಡಿಂಗ್‌ಗೆ ಇರುವ ₹500 ದಂಡವನ್ನು ಬರೋಬ್ಬರಿ ₹5,000 ಕ್ಕೆ ಹೆಚ್ಚಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.

ಅಲ್ಲದೆ, ಎರಡನೇ ಬಾರಿಯೂ ಅದೇ ತಪ್ಪನ್ನು ಮರುಕಳಿಸಿದರೆ ₹10,000 ವರೆಗೆ ದಂಡ ವಿಧಿಸುವ ಕಠಿಣ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದೆ. ಈ ದಂಡ ಹೆಚ್ಚಳದ ಕರಡು ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಕಾನೂನು ಇಲಾಖೆಯ ಸಮ್ಮತಿ ಹಾಗೂ ಅಭಿಪ್ರಾಯ ಪಡೆದ ತಕ್ಷಣವೇ ಅಧಿಕೃತ ಆದೇಶ ಹೊರಬೀಳಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!