LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: 72 ವರ್ಷಗಳ ಇತಿಹಾಸದಲ್ಲೇ ಮೊದಲು: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದ ಸ್ಥಳ ಬದಲಾವಣೆ

ನವದೆಹಲಿ: ಕಳೆದ ಏಳು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (National Film Awards) ಪ್ರದಾನ ಸಮಾರಂಭವು ದೇಶದ ರಾಜಧಾನಿ ದೆಹಲಿಯಿಂದ ಹೊರಗೆ ನಡೆಯಲು ಸಜ್ಜಾಗಿದೆ.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಗುಜರಾತ್‌ನ ಕೆವಾಡಿಯಾದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್ 22 ರಂದು ನಡೆಯಲಿರುವ ಈ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಲನಚಿತ್ರ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ವಿತರಿಸಲಿದ್ದಾರೆ.

ವಿಜ್ಞಾನ ಭವನದ ಸಂಪ್ರದಾಯಕ್ಕೆ ಬ್ರೇಕ್

1954ರಲ್ಲಿ ಆರಂಭಗೊಂಡ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಗಳು ವರ್ಷಗಳಿಂದ ನವದೆಹಲಿಯ ಪ್ರತಿಷ್ಠಿತ ವಿಜ್ಞಾನ ಭವನದಲ್ಲೇ ನೆರವೇರುತ್ತಿದ್ದವು. ಆದರೆ, ಈ ಬಾರಿ ಈ ದೀರ್ಘಕಾಲದ ಸಂಪ್ರದಾಯಕ್ಕೆ ವಿರಾಮ ನೀಡಲಾಗಿದ್ದು, ಮೊದಲ ಬಾರಿಗೆ ದೆಹಲಿಯಿಂದ ಹೊರಗಿನ ರಾಜ್ಯಕ್ಕೆ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ.

ಏಕತಾ ಪ್ರತಿಮೆಯ ಅಂಗಳದಲ್ಲಿ ಕಾರ್ಯಕ್ರಮ

2018ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅನಾವರಣಗೊಂಡ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 597 ಅಡಿ ಎತ್ತರದ ಜಗತ್ಪ್ರಸಿದ್ಧ 'ಏಕತಾ ಪ್ರತಿಮೆ' (Statue of Unity) ಆವರಣದಲ್ಲಿ ಈ ಬಾರಿಯ ಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನರವೇರಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!