ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟ ಪರಿಶೀಲಿಸಿದ್ದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು, ಇದೀಗ ಹಾಲು ಮತ್ತು ಹಾಲಿನ ಉತ್ಪನ್ನಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಗ್ರಾಹಕರಿಗೆ ಸರಬರಾಜಾಗುವ ಹಾಲಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ರಾಜ್ಯಾದ್ಯಂತ ಹಾಲಿನ ಪೌಡರ್, ಪನ್ನೀರ್ ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ವಿಶೇಷವಾಗಿ ಪನ್ನೀರ್ ತಯಾರಿಕೆಯ ಹಂತಗಳು, ಹಾಲಿನ ಸಂಯೋಜನೆ, ನೈರ್ಮಲ್ಯ ಮತ್ತು ಪ್ಯಾಕೆಟ್‌ಗಳ ಮೇಲಿನ ಲೇಬಲಿಂಗ್ ಸೇರಿದಂತೆ ಅಗತ್ಯ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. ರಾಜ್ಯಾದ್ಯಂತ ಈ ತಪಾಸಣೆಯನ್ನು ಚುರುಕುಗೊಳಿಸಲು ಮತ್ತು ಗುಣಮಟ್ಟವನ್ನು ಸೂಕ್ಷ್ಮವಾಗಿ ಸಮ್ಮಿಲನಗೊಳಿಸಲು FSSAI ಬಾರಿಯ ಒಟ್ಟು 23 ವಿಶೇಷ ಪಡೆ/ತಂಡಗಳನ್ನು ರಚಿಸಿದ್ದು, ಕಲ್ಸಬೆರಕೆ ಹಾಗೂ ಕಳಪೆ ಉತ್ಪನ್ನಗಳನ್ನು ತಡೆಯಲು ಭಾರಿ ಕಾರ್ಯಾಚರಣೆ ಆರಂಭಿಸಿದೆ.