LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಕರ್ನಾಟಕದ ಎಲ್ಲಾ ಕಾಲೇಜುಗಳಲ್ಲಿ HIV ಪರೀಕ್ಷೆ, ಕೌನ್ಸೆಲಿಂಗ್ ಶಿಬಿರ ಕಡ್ಡಾಯ ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಯುವಜನರಲ್ಲಿ HIV ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆಗೆ ಒಳಪಡಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ HIV ಪರೀಕ್ಷೆ ನಡೆಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇದೇ ಮೊದಲ ಬಾರಿಗೆ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯವ್ಯಾಪಿ HIV ಪರೀಕ್ಷಾ ಅಭಿಯಾನ ಆರಂಭಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ಹೌದು./ ರಾಜ್ಯದಲ್ಲಿ ಯುವಕರಲ್ಲಿ HIV ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಂತಹ ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದೆ.
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮ (NACP) ಹಾಗೂ ಇತರೆ ಸಂಸ್ಥೆಗಳ ವರದಿಗಳ ಪ್ರಕಾರ, HIV ಸೋಂಕಿನ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ HIV ಸೋಂಕಿತರು ಇದ್ದು, ಅವರಲ್ಲಿ 2.05 ಲಕ್ಷಕ್ಕೂ ಹೆಚ್ಚು ಮಂದಿ ಆಂಟಿ-ರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಸುಮಾರು 54 ಸಾವಿರ ಮಂದಿಗೆ ತಮಗೆ HIV ಸೋಂಕು ಇರುವುದೇ ತಿಳಿದಿಲ್ಲ. ವಿಶೇಷವಾಗಿ 18ರಿಂದ 35 ವರ್ಷದೊಳಗಿನ ಯುವಜನರಲ್ಲಿ ಸೋಂಕಿನ ಪ್ರಮಾಣ ವೇಗವಾಗಿ ಹೆಚ್ಚುತ್ತಿದ್ದು, 18ರಿಂದ 25 ವರ್ಷದೊಳಗಿನ ಸುಮಾರು 7,000 ಮಂದಿ HIV ಸೋಂಕಿಗೆ ಒಳಗಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ HIV ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಇದೇ ವೇಳೆ, ವಿದ್ಯಾರ್ಥಿಗಳು ತಮ್ಮ HIV ಸ್ಥಿತಿಯನ್ನು ಗೌಪ್ಯವಾಗಿ ಮತ್ತು ಸುಲಭವಾಗಿ ತಿಳಿದುಕೊಳ್ಳಲು QR ಕೋಡ್ ಆಧಾರಿತ ‘Know Your HIV Status’ (ನಿಮ್ಮ HIV ಸ್ಥಿತಿ ತಿಳಿಯಿರಿ) ಸ್ವಯಂ-ಅಪಾಯ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಚಯಿಸಲು ಇಲಾಖೆ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆದು ಅಗತ್ಯವಿದ್ದರೆ ತಕ್ಷಣ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?