LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ಇಸ್ರೇಲ್-ಅಮೆರಿಕಾ ಜಂಟಿ ದಾಳಿ: ಇರಾನ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ಟೆಹ್ರಾನ್: ಇರಾನ್ ಮೇಲೆ ಅಮೆರಿಕಾ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆ ಮುಂದುವರೆದಿದೆ. ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ ಮಾಡಲಾಗಿದೆ.

ಮಜೀದ್ ಖಾದೇಮಿ ಸುಮಾರು ಐದು ದಶಕಗಳ ಕಾಲ ಇರಾನ್‌ ನ ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೆಹ್ರಾನ್ ಸುತ್ತಮುತ್ತ ನಡೆದ ವೈಮಾನಿಕ ದಾಳಿಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ಖಾದೇಮಿ ಹತರಾಗಿರುವ ಬಗ್ಗೆ ಇರಾನ್ ಖಚಿತಪಡಿಸಿದೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಈ ದಾಳಿಗೆ ಅಮೆರಿಕ ಮತ್ತು ಇಸ್ರೇಲ್ ಕಾರಣ ಎಂದು ಆರೋಪಿಸಿದೆ. ಮೇಜರ್ ಜನರಲ್ ಮಜೀದ್ ಖಾದೇಮಿ ಎಲ್ಲಿ ಕೊಲ್ಲಲ್ಪಟ್ಟರು ಎಂಬುದರ ಕುರಿತು ತಕ್ಷಣದ ವಿವರಗಳನ್ನು ನೀಡಿಲ್ಲ. ಇರಾನ್ ರಾಜಧಾನಿ ಟೆಹ್ರಾನ್ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸೋಮವಾರ ಮುಂಜಾನೆ ಹಲವಾರು ವೈಮಾನಿಕ ದಾಳಿಗಳನ್ನು ನಡೆಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ಸೋಮವಾರ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಸರಣಿ ದಾಳಿಯಲ್ಲಿ 25 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇರಾನ್ ಇಸ್ರೇಲ್ ಮತ್ತು ಅದರ ನೆರೆಯ ರಾಷ್ಟ್ರಗಳ ಮೇಲೂ ದಾಳಿ ಮಾಡಿದೆ. ಭಾನುವಾರ, ಹೈಫಾ ನಗರದಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಫೆಬ್ರವರಿ 28, 2026 ರಂದು, ಅಮೆರಿಕ ಮತ್ತು ಇಸ್ರೇಲ್ ಆಪರೇಷನ್ ಎಪಿಕ್ ಫ್ಯೂರಿಯನ್ನು ಪ್ರಾರಂಭಿಸಿದವು. ಸುಪ್ರೀಂ ನಾಯಕ ಅಲಿ ಖಮೇನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದರು. ಖಮೇನಿಯ ಆಪ್ತ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಲಿ ಶಮ್ಖಾನಿ ಕೆಲವೇ ಗಂಟೆಗಳಲ್ಲಿ ಕೊಲ್ಲಲ್ಪಟ್ಟರು. ಐಆರ್‌ಜಿಸಿ ಕಮಾಂಡರ್, ಜನರಲ್ ಸ್ಟಾಫ್ ಮುಖ್ಯಸ್ಥ, ಬಸಿಜ್ ಪಡೆಗಳ ಮುಖ್ಯಸ್ಥ, ಐಆರ್‌ಜಿಸಿ ನೌಕಾ ಕಮಾಂಡರ್, ಗುಪ್ತಚರ ಸಚಿವರು ಮತ್ತು ಹಲವಾರು ಹಿರಿಯ ಮಿಲಿಟರಿ ಯೋಜನಾ ಅಧಿಕಾರಿಗಳು ದಾಳಿಯ ಆರಂಭದಲ್ಲೇ ಸಾವನ್ನಪ್ಪಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!