LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : KPSC ಹಗರಣ: '50 ಲಕ್ಷ ಕೇಳಿ, 20 ಲಕ್ಷಕ್ಕೆ ಡೀಲ್ ಮುಗಿಸಿದ್ದೆ' : ED ಮುಂದೆ ಶಿವಶಂಕರಪ್ಪ ಸಾಹುಕಾರ್ ತಪ್ಪೊಪ್ಪಿಗೆ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಇಡಿ ಅಧಿಕಾರಿಗಳ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಅಕ್ರಮದ ಕರಾಳ ಮುಖವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ವಿಚಾರಣೆ ವೇಳೆ ಶಿವಶಂಕರಪ್ಪ ನೀಡಿದ ಹೇಳಿಕೆ ಪ್ರಕಾರ, ಅಭ್ಯರ್ಥಿಯೊಬ್ಬರು ತಮಗೆ ದೂರದ ಸಂಬಂಧಿಯಾಗಿದ್ದರಿಂದ ಸಹಾಯ ಮಾಡಲು ಮುಂದಾಗಿದ್ದರು. ನೇಮಕಾತಿಗಾಗಿ ಆರಂಭದಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಅಂತಿಮವಾಗಿ 20 ಲಕ್ಷ ರೂಪಾಯಿಗೆ ಡೀಲ್ ಕುದುರಿಸಲಾಗಿದ್ದು, ಅದರಲ್ಲಿ 10 ಲಕ್ಷ ರೂಪಾಯಿ ಹಣವನ್ನು ಮುಂಗಡವಾಗಿ (ಅಡ್ವಾನ್ಸ್) ಪಡೆದುಕೊಂಡಿರುವುದಾಗಿ ಇಡಿ ಮುಂದೆ ಒಪ್ಪಿಕೊಂಡಿದ್ದಾರೆ. ಆದರೆ, ಇದರಲ್ಲಿ ಯಾವುದೇ ದುರುದ್ದೇಶವಿರಲಿಲ್ಲ ಎಂದು ಸಮಜಾಯಿಷಿ ನೀಡಲು ಯತ್ನಿಸಿದ್ದಾರೆ.

ಇತ್ತ ಶಿವಶಂಕರಪ್ಪ ತಮ್ಮ ತಪ್ಪೊಪ್ಪಿಗೆ ನೀಡಿದ್ದರೆ, ಮತ್ತೊಬ್ಬ ಆರೋಪಿಯಾಗಿರುವ ಆಯೋಗದ ಸದಸ್ಯೆ ಗೀತಾ ಅವರ ವಿಚಾರಣೆ ಪ್ರಗತಿಯಲ್ಲಿದೆ. ಗೀತಾ ಅವರು ಈ ಅವ್ಯವಹಾರಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ತಮ್ಮ ಹಳೆಯ ವಾದವನ್ನೇ ಮುಂದುವರಿಸಿದ್ದಾರೆ. ಅವರ ಮೊಂಡಾಟದ ನಡುವೆಯೂ ಲಭ್ಯವಿರುವ ಪಕ್ಕಾ ಸಾಕ್ಷ್ಯಾಧಾರಗಳನ್ನು ಮುಂದಿಟ್ಟುಕೊಂಡು ಇಡಿ ಅಧಿಕಾರಿಗಳು ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?