LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ನೀಟ್ ಮರುಪರೀಕ್ಷೆ ಸೋರಿಕೆಯಾಗಿದೆ ಎಂಬ ವಿಡಿಯೋ ವೈರಲ್: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಅಡಿದ NTA

ನವದೆಹಲಿ: ನೀಟ್-ಯುಜಿ -2026ರ ಮರು ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ 2 ಗಂಟೆಯಿಒಂದ ಸಂಜೆ ೫:೧೫ರವರೆ ಪರೀಕ್ಷೆ ನಡೆಯಲಿದೆ. ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ನೀಟ್ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ವಿಡಿಯೋ ವೈರಲ್ ಆಗಿದೆ.

ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ದೊಡ್ಡ ಜಾಲವೊಂದು ಸಕ್ರಿಯವಾಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಕಿಡಿಗೇಡಿಗಳು ಎಡಿಟ್ ಮಾಡಿದ ನಕಲಿ ಪ್ರಶ್ನೆ ಪತ್ರಿಕೆಯ ಫೋಟೋ ಹಾಗೂ ವಿಡಿಯೋಗಳನ್ನು ಇಂಟರ್ನೆಟ್‌ನಲ್ಲಿ ಹರಿಬಿಡುತ್ತಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳ ಗಮನವನ್ನು ಬೇರೆಡೆ ಸೆಳೆದು, ಅವರಲ್ಲಿ ಆತಂಕ ಮೂಡಿಸುವ ಸಲುವಾಗಿ ಇಂತಹ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ. ಇಂಟರ್ನೆಟ್‌ನಲ್ಲಿ ಸಿಗುವ ಇಂತಹ ಹರಿದಾಡುವ ಅನಾಮಧೇಯ ಪೋಸ್ಟ್‌ಗಳನ್ನು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನಂಬಬಾರದು. ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಮತ್ತು ನಿಖರ ಮಾಹಿತಿಗಾಗಿ ಕೇವಲ ಎನ್‌ಟಿಎ (NTA) ಅಧಿಕೃತ ವೆಬ್‌ಸೈಟ್ ಅನ್ನು ಮಾತ್ರ ಪರಿಶೀಲಿಸಬೇಕು.

ನೀಟ್ ಪರೀಕ್ಷೆಯ ಪಾರದರ್ಶಕತೆಗಾಗಿ ಈಗಾಗಲೇ ಸರ್ಕಾರ ಟೆಲಿಗ್ರಾಮ್‌ನಂತಹ ಆ್ಯಪ್‌ಗಳ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿ ಕಠಿಣ ಕ್ರಮ ಕೈಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ವದಂತಿಗಳಿಗೆ ತಲೆಕೆಡಿಸಿಕೊಳ್ಳದೆ, ಧೃತಿಗೆಡದೆ ತಮ್ಮ ಪರೀಕ್ಷೆಯ ಕಡೆಗೆ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?