LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ : ಪ್ರಮುಖ ಆರೋಪಿ ಅರೆಸ್ಟ್

ಮುಂಬೈ: ಬಾಲಿವುಡ್‌ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಫೆಬ್ರವರಿ 1ರಂದು ಮುಂಬೈನ ಜುಹು ಉಪನಗರದಲ್ಲಿರುವ ರೋಹಿತ್ ಶೆಟ್ಟಿ ಅವರ ‘ಶೆಟ್ಟಿ ಟವರ್’ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅವರ ಮನೆಯ ಬಾಲ್ಕನಿಯ ಗಾಜಿಗೆ ಹಾನಿಯಾಗಿತ್ತು.

ಚಿತ್ರರಂಗದಲ್ಲಿ ಭೀತಿ ಹುಟ್ಟಿಸಲು ಮತ್ತು ಹಣ ಸುಲಿಗೆ ಮಾಡುವ ಉದ್ದೇಶದಿಂದ ಕುಖ್ಯಾತ ಶುಭಂ ಲೋಂಕರ್ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾ ನಿವಾಸಿ ಪ್ರದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ’

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ರಾದ ಅಶೋಕ್ ನಗರದಲ್ಲಿ ಗುರುವಾರ ಸಂಜೆ 3.56ಕ್ಕೆ ಈತನನ್ನು ಸೆರೆಹಿಡಿಯಲಾಗಿದೆ. ಆಗ್ರಾದ ಎಸ್‌ಟಿಎಫ್ ಫೀಲ್ಡ್ ಯುನಿಟ್‌ನ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಕೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಆರೋಪಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಮೂಲಕ ಲೋಂಕರ್ ಗ್ಯಾಂಗ್‌ನ ಸಂಪರ್ಕಕ್ಕೆ ಬಂದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಭೂಗತ ಲೋಕದಲ್ಲಿ ತನ್ನ ಪ್ರಾಬಲ್ಯ ಸ್ಥಾಪಿಸಲು ಸನ್ನಿ, ದೀಪು ಮತ್ತು ಸೋನು ಎಂಬ ಸಹಚರರೊಂದಿಗೆ ಸೇರಿ ಈ ಕೃತ್ಯ ಎಸಗಿರುವುದಾಗಿ ಆತ ತಿಳಿಸಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರದೀಪ್ ಶರ್ಮಾ ಅಲಿಯಾಸ್ ಗೋಲು, ದೀಪಕ್ ಮತ್ತು ವಿಷ್ಣು ಕುಶ್ವಾಹ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!