LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG UPDATE: ಮಂಡ್ಯ ಎಕ್ಸ್‌ಪ್ರೆಸ್‌ವೇ ಕಾರು ಅಪಘಾತ: ಚಿಕಿತ್ಸೆ ಫಲಿಸದೆ ಬೆಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವು

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್‌ನಿಂದ ಕೆಳಗಿನ ಅಂಡರ್‌ಪಾಸ್‌ಗೆ ಹಾರಿಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ಮೂಲದ ಮಹಿಳಾ ಸಾಫ್ಟ್‌ವೇರ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತ ಮಹಿಳೆಯನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಅಂಜನಾ (32) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆಕೆಯ ಪತಿ ಹರೀಶ್ ಹಾಗೂ ಕಾರು ಚಾಲಕ ನಿತಿನ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ?

ಅಂಜನಾ ಅವರು ತಮ್ಮ ಪತಿ ಹರೀಶ್ ಅವರೊಂದಿಗೆ ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್ ಮೇಲೆ ವೇಗವಾಗಿ ಸಾಗುತ್ತಿದ್ದಾಗ, ಚಾಲಕ ನಿತಿನ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಫ್ಲೈಓವರ್ ಮೇಲಿಂದ ನೇರವಾಗಿ ಕೆಳಗಿನ ಅಂಡರ್‌ಪಾಸ್ ರಸ್ತೆಗೆ ಹಾರಿಬಿದ್ದಿದೆ.

ಕಿಟಕಿಯಿಂದ ಹೊರಕ್ಕೆ ಹಾರಿಬಿದ್ದಿದ್ದ ಟೆಕ್ಕಿ

ಕಾರು ಮೇಲಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಕಿಟಕಿಯ ಗಾಜು ಒಡೆದು ಅಂಜನಾ ಹೊರಕ್ಕೆ ಎಸೆಯಲ್ಪಟ್ಟಿದ್ದರು. ಅವರ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿತ್ತು. ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಪತ್ನಿಯನ್ನು ಕಂಡು ಪತಿ ಹರೀಶ್ ಕಣ್ಣೀರಿಟ್ಟು ಗೋಳಾಡಿದ್ದರು. ಸ್ಥಳೀಯರ ನೆರವಿನಿಂದ ಪೊಲೀಸರು ತಕ್ಷಣವೇ ಅಂಜನಾ ಸೇರಿದಂತೆ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಅಂಜನಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಗಾಯಗೊಂಡಿರುವ ಪತಿ ಹರೀಶ್ ಹಾಗೂ ಚಾಲಕ ನಿತಿನ್‌ಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?