LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIGG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ ಆ್ಯಪ್’ ನಲ್ಲಿ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿರುವ ಸರ್ಕಾರ, HRMS-ESS ಮತ್ತು ಕರ್ತವ್ಯ (KAMS) ಆ್ಯಪ್ ಮೂಲಕ ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದನ್ನು ಕಡ್ಡಾಯಗೊಳಿಸಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತ ಸಮಯದೊಳಗೆ ಆ್ಯಪ್‌ನಲ್ಲಿ ಹಾಜರಾತಿ ದಾಖಲಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಿಯಮ ಪಾಲನೆಗೆ ಇಲಾಖಾ ಮುಖ್ಯಸ್ಥರು (HODs) ಮತ್ತು ಡಿಡಿಒಗಳು (DDOs) ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಾಗೂ ರಾಜ್ಯ ಸರ್ಕಾರವು HRMS-ESS ಹಾಗೂ ಕರ್ನಾಟಕ ಅಟೆಂಡೆನ್ಸ್ ಮಾನಿಟರಿಂಗ್ ಸಿಸ್ಟಮ್ (KAMS) ಆ್ಯಪ್‌ಗಳಲ್ಲಿ ಕಚೇರಿಗಳ ಭೌಗೋಳಿಕ ನಿರ್ದೇಶಾಂಕಗಳನ್ನು (Geo Coordinates) ಕಡ್ಡಾಯವಾಗಿ ನಮೂದಿಸಲು ಎಲ್ಲಾ ಸರ್ಕಾರಿ ನೌಕರರಿಗೆ ಸೂಚಿಸಿದೆ. ಈ ಕುರಿತು ಹಣಕಾಸು ಇಲಾಖೆ (HRMS-2.0 ನಿರ್ದೇಶನಾಲಯ) ಮಹತ್ವದ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಸುತ್ತೋಲೆ ಸಂಖ್ಯೆ FD/HRMS H2/OL/2025/250/132 ದಿನಾಂಕ 10-06-2026 ರ ಪ್ರಕಾರ, 05-06-2026 ರಂದು ಹೊರಡಿಸಿದ್ದ ಹಿಂದಿನ ಸೂಚನೆಗೆ ಅನುಗುಣವಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಇಲಾಖೆಗಳು ತಮ್ಮ ಕಚೇರಿಗಳ ಸ್ಥಳ ಮಾಹಿತಿಯನ್ನು HRMS ವ್ಯವಸ್ಥೆಯಲ್ಲಿ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಏನು ಮಾಡಬೇಕು?

  • Group ‘B’ ಹಾಗೂ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ತಮ್ಮ ಕಚೇರಿಯ ಭೌಗೋಳಿಕ ನಿರ್ದೇಶಾಂಕಗಳನ್ನು HRMS-ESS App ಮೂಲಕ ನಮೂದಿಸಬೇಕು.
  • HRMS-ESS App ನಲ್ಲಿ ನಮೂದಿಸಿದ ನಿರ್ದೇಶಾಂಕಗಳನ್ನು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಪರಿಶೀಲಿಸಿ ದೃಢೀಕರಿಸಬೇಕು.
  • ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯೂ KAMS App ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು.

ಇಲಾಖಾ ಮುಖ್ಯಸ್ಥರು ಮತ್ತು DDOಗಳಿಗೆ ಸೂಚನೆ

ಸರ್ಕಾರವು ಎಲ್ಲಾ ಇಲಾಖೆಗಳ ಮುಖ್ಯಸ್ಥರು (HODs) ಹಾಗೂ Drawing and Disbursing Officers (DDOs) ಅವರಿಗೆ ತಮ್ಮ ಅಧೀನದಲ್ಲಿರುವ ನೌಕರರು ಈ ಪ್ರಕ್ರಿಯೆಯನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ತಾಂತ್ರಿಕ ಸಹಾಯಕ್ಕೆ ಸಂಪರ್ಕ

KAMS App ನಲ್ಲಿ ಹಾಜರಾತಿ ದಾಖಲಿಸುವ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ:

ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು HRMS-2.0 ಮತ್ತು KAMS App ಸಂಬಂಧಿತ ಎಲ್ಲಾ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ನವೀಕರಿಸಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?