LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIGG NEWS: ಸಚಿವ ಮಧು ಬಂಗಾರಪ್ಪ ಪಿಎ ₹25 ಲಕ್ಷ ಲಂಚ: ಸೂಡಾ ಅಧ್ಯಕ್ಷ ಗಂಭೀರ ಆರೋಪ!

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಬೂದಿಮುಚ್ಚಿದ ಕೆಂಡದಂತಿದ್ದ ಭಿನ್ನಮತ ಈಗ ಬಹಿರಂಗವಾಗಿದ್ದು, ಸ್ವಪಕ್ಷೀಯ ನಾಯಕರ ವಿರುದ್ಧವೇ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಗಂಭೀರ ಲಂಚದ ಆರೋಪ ಮಾಡಿ ಬಾಂಬ್ ಸಿಡಿಸಿದ್ದಾರೆ.

ಸಚಿವ ಮಧು ಬಂಗಾರಪ್ಪ ಪಿಎ ವಿರುದ್ಧ ಲಂಚದ ಆರೋಪ:

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಆಪ್ತ ಸಹಾಯಕ ಜಿ.ಡಿ. ಮಂಜುನಾಥ್ ಹಾಗೂ ನಾಯಕ ಕಲಗೋಡು ರತ್ನಾಕರ್ ವಿರುದ್ಧ ಸಾರ್ವಜನಿಕವಾಗಿ ವಾಗ್ದಾಳಿ ನಡೆಸಿದರು. "ಸಚಿವರ ಪಿಎ ಕಚೇರಿಗಳಿಗೆ ತೆರಳಿ ಅಧಿಕಾರಿಗಳನ್ನು ಬೆದರಿಸಿ 5 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಲಂಚದ ಬೇಡಿಕೆ ಇಡುತ್ತಿದ್ದಾರೆ. ಸೂಡಾ ಆಯುಕ್ತರಿಗೇ ನೇರವಾಗಿ 25 ಲಕ್ಷ ರೂಪಾಯಿ ಕೊಡುವಂತೆ ಪೀಡಿಸಿದ್ದಾರೆ. ಕಾಂಗ್ರೆಸ್‌ಗೆ ಯಾವುದೇ ಕೊಡುಗೆ ನೀಡದ ಇಂತಹ ವ್ಯಕ್ತಿಗಳಿಂದ ಪಕ್ಷದ ಹೆಸರು ಹಾಳಾಗುತ್ತಿದೆ" ಎಂದು ಕಿಡಿಕಾರಿದರು.

"ಕಾಂಗ್ರೆಸ್‌ನ ಗಂಧ-ಗಾಳಿ ಗೊತ್ತಿಲ್ಲದ ವ್ಯಕ್ತಿ ಆಡಳಿತ ನಡೆಸುತ್ತಿದ್ದಾರೆ":

ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ತೀವ್ರ ಏಕವಚನದಲ್ಲೇ ಆಕ್ರೋಶ ಹೊರಹಾಕಿದ ಸುಂದರೇಶ್, "ಜೆಡಿಎಸ್‌ನಿಂದ ಬಂದಿರುವ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಗಂಧ-ಗಾಳಿಯೇ ತಿಳಿದಿಲ್ಲ. ಅವರು ಕೆಲವೇ ಕೆಲವು ದಡ್ಡರು ಹಾಗೂ ಈಡಿಯಟ್‌ಗಳ ಮಾತು ಕೇಳಿಕೊಂಡು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷಕ್ಕೋಸ್ಕರ ರಕ್ತ ಬೆವರು ಹರಿಸಿದ ಸತ್ಯವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ" ಎಂದು ಆರೋಪಿಸಿದರು.

ಜಿಲ್ಲಾ ಅಧ್ಯಕ್ಷರ ಆಯ್ಕೆಗೂ ವಿರೋಧ – ಹೈಕಮಾಂಡ್‌ಗೆ ಎಚ್ಚರಿಕೆ:

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್.ಸಿ. ಯೋಗೀಶ್ ಅವರನ್ನು ನೇಮಕ ಮಾಡಲು ಹೊರಟಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಯೋಗೀಶ್ ಆ ಹುದ್ದೆಗೆ ಅರ್ಹರಲ್ಲ ಎಂದರು. ಜೊತೆಗೆ, ಜಿಲ್ಲೆಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಅವರನ್ನು ಜಿಲ್ಲೆಯಿಂದ ಓಡಿಸುವುದಾಗಿ ಗುಡುಗಿದರು.

ಬೇಳೂರು ಗೋಪಾಲಕೃಷ್ಣ, ಬಿ.ಕೆ. ಸಂಗಮೇಶ್ ಹಾಗೂ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ ಅವರು, "ಮಧು ಬಂಗಾರಪ್ಪ ನಮ್ಮನ್ನೇ ಟಾರ್ಗೆಟ್ ಮಾಡಲು ಹೊರಟರೆ ಮುಂಬರುವ ಚುನಾವಣೆಯಲ್ಲಿ ಸೊರಬ ಕ್ಷೇತ್ರ ಹಾಗೂ ಲೋಕಸಭೆಗೆ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಾವು ಸಿದ್ಧರಿದ್ದೇವೆ" ಎಂದು ಬಹಿರಂಗ ಸವಾಲು ಹಾಕಿದರು.

ಜಿಲ್ಲೆಯಲ್ಲಿ ನಡೆದಿರುವ ಈ ಎಲ್ಲಾ ಬೆಳವಣಿಗೆಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಶೀಘ್ರವೇ ದೂರು ನೀಡುವುದಾಗಿ ಸುಂದರೇಶ್ ತಿಳಿಸಿದ್ದು, ಈ ಘಟನೆ ಶಿವಮೊಗ್ಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!