LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKIND : ನಾಪತ್ತೆಯಾಗಿದ್ದ KRIDL ಎಇ‌ಇ ಪರ್ವೇಜ್ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ!

ಗದಗ: ಕಳೆದ ಕೆಲವು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಗದಗ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಪರ್ವೇಜ್ ಧಾರವಾಡ ಅವರನ್ನು ಕೊನೆಗೂ ಗದಗ ಪೊಲೀಸರು ಪತ್ತೆಹಚ್ಚಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪರ್ವೇಜ್ ಪತ್ತೆಯಾಗಿದ್ದು, ಅವರ ಓಡಾಟದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಪ್ರಸ್ತುತ ಭೋಪಾಲ್‌ನಲ್ಲಿ ಬೀಡುಬಿಟ್ಟಿರುವ ಗದಗ ವಿಶೇಷ ಪೊಲೀಸ್ ಪಡೆ ಅವರನ್ನು ಸುರಕ್ಷಿತವಾಗಿ ಸ್ವಗ್ರಾಮಕ್ಕೆ ಕರೆತರಲು ಅಗತ್ಯ ಕ್ರಮ ಕೈಗೊಂಡಿದೆ.

ಪರ್ವೇಜ್ ಅವರು ನಾಪತ್ತೆಯಾದ ಬಳಿಕ ತಮ್ಮ ಮೊಬೈಲ್ ಫೋನ್ ಹಾಗೂ ಆನ್‌ಲೈನ್ ಬ್ಯಾಂಕಿಂಗ್ ವ್ಯವಹಾರಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದರು. ಡಿಜಿಟಲ್ ಸುಳಿವುಗಳು ಸಿಗದ ಕಾರಣ ಈ ಪ್ರಕರಣ ಗದಗ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 5 ವಿಶೇಷ ತಂಡಗಳನ್ನು ರಚಿಸಿ, ರೈಲ್ವೆ ನಿಲ್ದಾಣಗಳು ಸೇರಿದಂತೆ ವಿವಿಧ ಸಂಭಾವ್ಯ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸುದೀರ್ಘವಾಗಿ ಪರಿಶೀಲಿಸಿದ ಪೊಲೀಸರು, ಅಂತಿಮವಾಗಿ ಭೋಪಾಲ್‌ನಲ್ಲಿ ಅವರಿದ್ದ ಜಾಗವನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಗದಗ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸರ್ಕಾರದಿಂದ ನಾನಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ತಮಗೂ ಮತ್ತು ತಮ್ಮ ಕುಟುಂಬಕ್ಕೂ ಹಣಕ್ಕಾಗಿ ನಿರಂತರ ಕಿರುಕುಳ ಹಾಗೂ ಒತ್ತಡ ನೀಡುತ್ತಿದ್ದಾರೆ ಎಂದು ಪರ್ವೇಜ್ ಅವರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ. ಈ ತೀವ್ರ ಮಾನಸಿಕ ಕಿರುಕುಳ ತಾಳಲಾರದೆ ಅವರು ಮನೆ ತೊರೆದಿದ್ದರು ಎಂದು ತಿಳಿದುಬಂದಿದೆ. ಪ್ರಕರಣದ ಗಂಭೀರತೆ ಅರಿತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಪರ್ವೇಜ್ ಅವರ ತಂದೆ ಜಾಫರ್ ಸಾಬ್ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದ್ದರು. ಇಲಾಖೆಯಲ್ಲಿ ಅನುದಾನದ ಕೊರತೆಯಿಲ್ಲ, ಯಾವುದೇ ಆರ್ಥಿಕ ಸಮಸ್ಯೆಯಿದ್ದರೂ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!