LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಶೀಘ್ರದಲ್ಲೇ ಇನ್ನೂ 25 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಣೆ: ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಬರ ಪರಿಶೀಲನೆ ಮುಕ್ತಾಯವಾಗಿಲ್ಲ. ಹಂತ ಹಂತವಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಈಗಾಗಲೇ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಎರಡನೇ ಹಂತದ ಪರಿಶೀಲನೆ ನಡೆಯುತ್ತಿದೆ. 25 ತಾಲ್ಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಘೋಷಣೆಗೆ ಅರ್ಹತೆ ಪಡೆದಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರ ಪೀಡಿತ ಪ್ರದೇಶಗಳ ಘೋಷಣೆ ಪ್ರಕ್ರಿಯೆ ವಿಳಂಬವಾಗಿಲ್ಲ. ಮುಂಗಾರು ಹಾಗೂ ಹಿಂಗಾರು ಕಡಿಮೆ ಆಗುವವರೆಗೂ ಪರಿಶೀಲನೆ ಮುಂದುವರಿಯುತ್ತದೆ. ಕಳೆದ ಬಾರಿ ಸುಮಾರು 200 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿತ್ತು. ಈ ಬಾರಿಯೂ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಿಸಲ್ಪಡುವ ಪರಿಸ್ಥಿತಿ ಇದೆ. ಕರಾವಳಿ ಪ್ರದೇಶವನ್ನು ಹೊರತುಪಡಿಸಿ ಉಳಿದೆಲ್ಲೆಡೆ ಬರ ಪರಿಸ್ಥಿತಿ ಇದೆ ಎಂದರು.

ಬೇಕೆಂದೆ ಬರಪೀಡಿತ ತಾಲ್ಲೂಕುಗಳನ್ನು ಕೈಬಿಟ್ಟಿಲ್ಲ:

ಕೆಲವು ಶಾಸಕರು ತಮ್ಮ ತಾಲ್ಲೂಕುಗಳನ್ನು ಬೇಕೆಂದೇ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ತೀವ್ರ ಬರ ಇದ್ದರೂ ತಮ್ಮ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ ಎಂದು ಯಾರೂ ಆತಂಕಪಡುವ ಅಗತ್ಯವಿಲ್ಲ. ಇಡೀ ರಾಜ್ಯವೇ ಇಂದು ಬರಗಾಲವನ್ನು ಎದುರಿಸುತ್ತಿದೆ. ಬರಪೀಡಿತ ಪ್ರದೇಶಗಳೆಂದು ಘೋಷಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾರೊಬ್ಬರ ಪಾತ್ರವೂ ಇಲ್ಲ. ಬೇಕೆಂದೆ ಕೆಲವು ತಾಲ್ಲೂಕುಗಳನ್ನು ಕೈಬಿಟ್ಟಿದ್ದಾರೆ ಎಂಬುದು ಆಧಾರ ರಹಿತ ಆರೋಪವಾಗಿದೆ. ಪಕ್ಷ ನೋಡಿಕೊಂಡು ಬರ ಸಂಭವಿಸಿಲ್ಲ. ಈಗಾಗಲೇ ಘೋಷಿತ ಪಟ್ಟಿಯಲ್ಲಿ ವಿರೋಧ ಪಕ್ಷದ ಶಾಸಕರಿರುವ ತಾಲ್ಲೂಕುಗಳೂ ಇವೆಯಲ್ಲವೇ? ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರವೇ ತನ್ನ ಪಾಡಿಗೆ ತಾನು ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿದರೆ ಕೇಂದ್ರದಿಂದ ನೆರವು ಪಡೆಯಲು ಸಾಧ್ಯವಾಗುವುದಿಲ್ಲ. ಕೇಂದ್ರದ ಬರಪರಿಹಾರ ಪಡೆಯಲು ನಾವು ಸಹನೆಯಿಂದ ವರ್ತಿಸಿದಷ್ಟೂ ಉತ್ತಮ. ಕೇಂದ್ರ ಸರ್ಕಾರದ ನಿಯಮಗಳಡಿ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಲಾಗುತ್ತದೆಯೇ ವಿನಃ ರಾಜ್ಯ ಸರ್ಕಾರವೇ ಸ್ವಂತ ನಿರ್ಧಾರಗಳನ್ನು ತೆಗೆದುಕೊಂಡು ಘೋಷಣೆ ಮಾಡಲು ಸಾಧ್ಯವಿಲ್ಲ. ಉಪಗ್ರಹ ಆಧಾರಿತ ಚಿತ್ರಗಳನ್ನು ಪರಿಶೀಲಿಸಿ, ಗ್ರೌಂಡ್‌ ಟ್ರುಥಿಂಗ್‌ ಮಾಡಿ, ವೈಜ್ಞಾನಿಕ ಅಧ್ಯಯನದ ಬಳಿಕ ಘೋಷಣೆ ಮಾಡುತ್ತಾರೆ. ಇದನ್ನು ನಾನು ಅಧಿವೇಶನದ ವೇಳೆಯೇ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಪರಮೇಶ್ವರ ಅವರು ಒತ್ತಿ ಹೇಳಿದರು.  

ಅಹಿಂದದಲ್ಲಿ ಒಡಕಿಲ್ಲ:

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಸಿದ್ದರಾಮಯ್ಯನವರಿಗೆ ಅಭಿನಂದನೆ ಕಾರ್ಯಕ್ರಮಕ್ಕೆ ಸತೀಶ್‌ ಜಾರಕಿಹೊಳಿ, ಡಾ. ಎಚ್‌. ಸಿ. ಮಹದೇವಪ್ಪ ಅವರಿಗೆ ಆಹ್ವಾನ ಇಲ್ಲದಿರುವ ವಿಚಾರವನ್ನು ಪ್ರಸ್ತಾಪಿಸಿ, ಅಹಿಂದ ಸಂಘಟನೆಯಲ್ಲಿ ಒಡಕು ಮೂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು, ಮೊನ್ನೆ ನಡೆದಿದ್ದು ಅಹಿಂದ ಸಮಾವೇಶವಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮಲ್ಲಿ ಯಾವುದೇ ಒಡಕಿಲ್ಲ, ಅಹಿಂದ ನಾಯಕತ್ವ ಕವಲು ದಾರಿ ಹಿಡಿದಿಲ್ಲ ಎಂದರು. 

ನೈಸ್‌ ನಿವೇಶನ ಹಂಚಿಕೆ: ಮಾನವೀಯತೆ ದೃಷ್ಟಿಯಿಂದ ತೀರ್ಮಾನ

ನೈಸ್‌ ವಿಚಾರವಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ರಕ್ಕೆ ಸಂಬಂಧಿಸಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು, ಭೂಮಿ ಕಳೆದುಕೊಳ್ಳುವವರಿಗಿಂತ ಸಚಿವ ಸಂಪುಟದಲ್ಲಿರುವಂತಹ ಅನೇಕ ಸಚಿವರು ಅದರ ಲಾಭ ಪಡೆಯುತ್ತಿದ್ದಾರೆ ಎಂದು ಆರೋಪ ಆಧಾರ ರಹಿತವಾಗಿದೆ ಎಂದರು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ಮಾನವೀಯತೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದೆ. ನೂರಾರು ಕೋಟಿ ಬೆಲೆಬಾಳುವ ಭೂಮಿಯನ್ನು ಕೆಲವು ಲಕ್ಷಗಳಿಗೆ ಬಿಟ್ಟುಕೊಟ್ಟ ರೈತರಿಗೆ ಅನ್ಯಾಯವಾಗದಿರಲು 1453 ನಿವೇಶಗಳನ್ನು ಹಂಚಿಕೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವಿಚಾರದಲ್ಲಿ ಯಾರಿಗೂ ವೈಯಕ್ತಿಕ ಲಾಭ ಮಾಡಿಕೊಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.   

ಅಪೆಕ್ಸ್‌ ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿ, ಕೆ. ಎನ್‌. ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಒಂದೇ ಜಿಲ್ಲೆಯವರಾದ ನಾವು ಈ ವಿಚಾರವಾಗಿ ಭೇಟಿಯಾಗಿ ಚರ್ಚಿಸಿದ್ದೇವೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಿರ್ದೇಶಕರನ್ನೆಲ್ಲ ಕರೆದು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು.

ಇಂದು ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರವು ತಮಿಳುನಾಡು ಕಾವೇರಿ ನೀರನ್ನು 4.8 ಹೆಕ್ಟೆರ್‌ ಪ್ರದೇಶದ ಕೃಷಿಗೆ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾವಿಸಲಿದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!