LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯದಲ್ಲಿ ನಂದಿನಿ ಹಾಲು ದರ ಏರಿಕೆ ಸಾಧ್ಯತೆ: ಲೀಟರ್‌ಗೆ ₹10 ಹೆಚ್ಚಳಕ್ಕೆ 'KMF' ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ಬೆಲೆಯಲ್ಲಿ 4 ರಿಂದ 5 ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ಆದರೆ, ಹಾಲಿನ ದರವನ್ನು ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರಕಾರವನ್ನು ಒತ್ತಾಯಿಸಿವೆ. ಈ ಕುರಿತು ಹಾಲು ಒಕ್ಕೂಟದ ಅಧ್ಯಕ್ಷರೆಲ್ಲರೂ ಸೇರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಧಿಕೃತ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಸಂಕಷ್ಟದಲ್ಲಿರುವ ಹಾಲಿನ ಉತ್ಪಾದಕ ರೈತರನ್ನು ಕಾಪಾಡುವ ಉದ್ದೇಶದಿಂದ ಈ ಬೆಲೆ ಏರಿಕೆ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ (ಬಮುಲ್) ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಬೆಲೆ ಏರಿಕೆಯ ಕುರಿತು ವಿವರಣೆ ನೀಡಿದ ಡಿ.ಕೆ. ಸುರೇಶ್, ಪ್ರತಿ ಲೀಟರ್‌ಗೆ ಹೆಚ್ಚಿಸುವ 10 ರೂಪಾಯಿ ಪೈಕಿ 7 ರೂಪಾಯಿಯನ್ನು ನೇರವಾಗಿ ರೈತರಿಗೆ ನೀಡಬೇಕು ಹಾಗೂ ಉಳಿದ 3 ರೂಪಾಯಿಯನ್ನು ನಷ್ಟದಲ್ಲಿರುವ ಹಾಲು ಒಕ್ಕೂಟಗಳ ನಿರ್ವಹಣೆಗೆ ನೀಡಬೇಕು ಎಂದು ಸಿಎಂ ಬಳಿ ಮನವಿ ಮಾಡಲಾಗಿದೆ. ಒಕ್ಕೂಟಗಳ ಆರ್ಥಿಕ ಹಿತದೃಷ್ಟಿಯಿಂದ ಸರಕಾರ ನೆರವಾಗಬೇಕೆಂದು ಕೋರಲಾಗಿದ್ದು, ಈ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!