LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡಕ್ಕೆ, ಕ್ಯಾಪ್ಟನ್ ಆಗಿ ವಿಜಯಪುರದ ಶ್ರೇಯಾ ಚೌಹಾಣ್ ಆಯ್ಕೆ!

ವಿಜಯಪುರ: ಮುಂಬರುವ ಅಕ್ಟೋಬರ್ 9 ರಿಂದ ಚಂಡೀಗಢದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಅಂಡರ್-19 ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ವಿಜಯಪುರದ ಉದಯೋನ್ಮುಖ ಆಟಗಾರ್ತಿ ಶ್ರೇಯಾ ಚೌಹಾಣ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಲಗೈ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ಆಗಿರುವ ಶ್ರೇಯಾ ಅವರ ಈ ಸಾಧನೆ ಇಡೀ ರಾಜ್ಯವೇ ಹೆಮ್ಮೆಪಡುವಂತೆ ಮಾಡಿದೆ. ಸೆಪ್ಟೆಂಬರ್ 15 ರಂದು ಕರ್ನಾಟಕ ಕ್ರಿಕೆಟ್ ಮಂಡಳಿಯು ಈ ಅಧಿಕೃತ ಘೋಷಣೆ ಮಾಡಿದ್ದು, ಶ್ರೇಯಾ ನಾಯಕಿಯಾಗಿ ಆಯ್ಕೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಸಂತಸದ ವಾತಾವರಣ ಮನೆಮಾಡಿದೆ.

ಈ ಬಾರಿಯ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಿಜೋರಾಂ, ಮುಂಬೈ, ರಾಜಸ್ಥಾನ್, ಛತ್ತೀಸ್‌ಗಢ ಹಾಗೂ ಕೇರಳ ತಂಡಗಳ ವಿರುದ್ಧ ಸೆಣಸಾಡಲಿದೆ. ಈ ಸವಾಲಿನ ಸರಣಿಗೆ ಸಜ್ಜಾಗಲು ಕೋಚ್ ಮುರಳಿ ಅವರ ಗರಡಿಯಲ್ಲಿ ಶ್ರೇಯಾ ಅತ್ಯಂತ ಕಠಿಣ ತರಬೇತಿ ಪಡೆದಿದ್ದಾರೆ. ತಮ್ಮ ತರಬೇತಿಯ ಆರಂಭಿಕ ದಿನಗಳಲ್ಲಿ 'ಓಂ ಕ್ರಿಕೆಟ್ ಅಕಾಡೆಮಿ' ಹಾಗೂ 'ಸ್ಪೋರ್ಟ್ಸ್ ಅರೇನಾ'ದಲ್ಲಿ ಕ್ರಿಕೆಟ್‌ನ ಸೂಕ್ಷ್ಮಗಳನ್ನು ಕರಗತ ಮಾಡಿಕೊಂಡಿದ್ದ ಶ್ರೇಯಾ, ಸದ್ಯ ತಮ್ಮ ಅತ್ಯುತ್ತಮ ಪ್ರದರ್ಶನದ ಮೂಲಕ ನಾಯಕತ್ವದ ಜವಾಬ್ದಾರಿಯನ್ನು ಪಡೆದುಕೊಂಡಿದ್ದಾರೆ.

ಆಟ ಒಂದರಲ್ಲೇ ಅಲ್ಲದೆ, ಓದಿನಲ್ಲೂ ಮುಂಚೂಣಿಯಲ್ಲಿರುವ ಶ್ರೇಯಾ ಚೌಹಾಣ್ ಬಹುಮುಖ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ನಗರದ SEG ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಇವರು, ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ಸಮತೋಲನ ಕಾಯ್ದುಕೊಂಡು ಮುನ್ನಡೆಯುತ್ತಿದ್ದಾರೆ. ಕಠಿಣ ಅಭ್ಯಾಸ ಹಾಗೂ ಶ್ರಮದ ಫಲವಾಗಿ ರಾಜ್ಯ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿರುವ ಶ್ರೇಯಾ, ಚಂಡೀಗಢದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಕರ್ನಾಟಕಕ್ಕೆ ಸರಣಿ ಗೆಲುವು ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!