LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಚಾಮುಂಡಿ ಬೆಟ್ಟದಲ್ಲಿ 'ಮಹಿಷ ದಸರಾ'ಗೆ ಬ್ರೇಕ್ : 200 ಮೀಟರ್ ಸುತ್ತಲೂ 144 ಸೆಕ್ಷನ್ ಜಾರಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ‘ಮಹಿಷ ದಸರಾ’ ಆಚರಣೆ ಮುನ್ನೆಲೆಗೆ ಬಂದಿದ್ದು, ಚಾಮುಂಡಿ ಬೆಟ್ಟದಲ್ಲಿ ಆಚರಣೆ ಮಾಡಲು ಆಯೋಜಕರು ಸಿದ್ಧತೆ ನಡೆಸಿದ್ದರು. ಆದರೆ, ದಸರಾ ಸಮಯದಲ್ಲಿ ಪ್ರವಾಸಿಗರಿಗೆ ತೊಂದರೆಯಾಗದಂತೆ ಹಾಗೂ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ನಗರ ಪೊಲೀಸರು ಮಹಿಷ ದಸರಾ ಆಚರಣೆಗೆ ತಡೆ ಒಡ್ಡಿದ್ದಾರೆ.

ಆಯೋಜಕರು ಚಾಮುಂಡಿ ಬೆಟ್ಟದ ಮೇಲಿರುವ ಮಹಿಷಾಸುರನ ಪ್ರತಿಮೆ ಬಳಿ ಕಾರ್ಯಕ್ರಮ ನಡೆಸಲು ಯೋಜಿಸಿದ್ದರು. ಆದರೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ರಾತ್ರಿ 12 ಗಂಟೆಯಿಂದ ಆಗಸ್ಟ್ 11ರ ಬೆಳಗಿನ ಜಾವ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಈ ಕುರಿತು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಬೆಟ್ಟದ ಮೇಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!