LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹28 ಕೋಟಿ ಮೌಲ್ಯದ ಹೈಡ್ರೋ ಗಾಂಜಾ, ₹1.75 ಕೋಟಿ ಚಿನ್ನ ಜಪ್ತಿ!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಹಾಗೂ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಬರೋಬ್ಬರಿ ₹28 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ₹1.75 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಪ್ರಯಾಣಿಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಬ್ಯಾಂಕಾಕ್ ಮತ್ತು ವಿಯೆಟ್ನಾಂನಿಂದ ಆಗಮಿಸಿದ ಪ್ರಯಾಣಿಕರ ಚಲನವಲನದ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು, ಅವರ ಲಗೇಜ್ ಬ್ಯಾಗ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ಈ ವೇಳೆ ಬ್ಯಾಗ್‌ಗಳ ಒಳಗಿನ ರಹಸ್ಯ ಕಪಾಟುಗಳಲ್ಲಿ ಅಡಗಿಸಿಡಲಾಗಿದ್ದ ಒಟ್ಟು 80.11 ಕೆಜಿ ತೂಕದ ಅತ್ಯಂತ ದುಬಾರಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹28 ಕೋಟಿ ಎಂದು ಅಂದಾಜಿಸಲಾಗಿದೆ. ಗಾಂಜಾ ತಂದಿದ್ದ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಎನ್‌ಡಿಪಿಎಸ್‌ (NDPS) ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ.

ಇದರೊಂದಿಗೆ, ಮತ್ತೊಂದು ಕಾರ್ಯಾಚರಣೆಯಲ್ಲಿ ವಿದೇಶದಿಂದ ಕಾನೂನುಬಾಹಿರವಾಗಿ ಸಾಗಿಸಲಾಗುತ್ತಿದ್ದ ₹1.75 ಕೋಟಿ ಮೌಲ್ಯದ ಅಕ್ರಮ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಬ್ಬ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಸ್ತುತ ಬಂಧಿತರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದ್ದು, ಈ ಅಕ್ರಮ ಸಾಗಾಟದ ಜಾಲದ ಹಿಂದಿರುವ ಪ್ರಮುಖ ರೂವಾರಿಗಳ ಪತ್ತೆಗೆ ಅಧಿಕಾರಿಗಳು ಜಾಲ ಬೀಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!