LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ವಿಜಯಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲು!

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಇಂದು ಮುಂಜಾನೆ ಸಾಧಾರಣ ಪ್ರಮಾಣದ ಭೂಕಂಪನ ಸಂಭವಿಸಿದೆ. ಮುಂಜಾನೆ 2:04ರ ಸುಮಾರಿಗೆ ಈ ಭೂಕಂಪನ ಜರುಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ನೆಟ್‌ವರ್ಕ್‌ನಲ್ಲಿ ಅಧಿಕೃತವಾಗಿ ದಾಖಲಾಗಿದೆ. ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ಕಂಡುಬಂದಿದ್ದು, ಬಸವನ ಬಾಗೇವಾಡಿಯಿಂದ ಈಶಾನ್ಯಕ್ಕೆ ಸುಮಾರು 3.9 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು (Epicenter) ಪತ್ತೆಯಾಗಿದೆ.

ಈ ಕಂಪನವು ಭೂಮಿಯ ಮೇಲ್ಮೈನಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಉಂಟಾಗಿದೆ. ಹುನಶ್ಯಾಳ ಗ್ರಾಮ ಪಂಚಾಯಿತಿಯಿಂದ ಪಶ್ಚಿಮಕ್ಕೆ 7.8 ಕಿ.ಮೀ, ಹೂವಿನ ಹಿಪ್ಪರಗಿ ಗ್ರಾಮ ಪಂಚಾಯಿತಿಯಿಂದ ಪಶ್ಚಿಮಕ್ಕೆ 11.2 ಕಿ.ಮೀ, ಆಲಮಟ್ಟಿ ಜಲಾಶಯದಿಂದ ಈಶಾನ್ಯಕ್ಕೆ 31.0 ಕಿ.ಮೀ ಹಾಗೂ ವಿಜಯಪುರ ನಗರದಿಂದ ನೈರುತ್ಯಕ್ಕೆ 38.0 ಕಿ.ಮೀ ದೂರದಲ್ಲಿ ಕೇಂದ್ರಬಿಂದು ಕಂಡುಬಂದಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಆಳವಾದ ವಿಶ್ಲೇಷಣೆಯ ನಂತರ ಸ್ಪಷ್ಟಪಡಿಸಲಾಗಿದೆ.

ಕಂಪನದ ತೀವ್ರತೆಯು ಅತ್ಯಂತ ಕಡಿಮೆಯಾಗಿದ್ದರಿಂದ, ಕೇಂದ್ರಬಿಂದುವಿನಿಂದ ಸುಮಾರು 50 ರಿಂದ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸಣ್ಣ ಪ್ರಮಾಣದ ಕಂಪನದ ಅನುಭವವಾಗಿರಬಹುದು. ಆದರೆ ಸ್ಥಳೀಯ ಜನರಿಗೆ ಅಥವಾ ಆಸ್ತಿಪಾಸ್ತಿಗೆ ಯಾವುದೇ ರೀತಿಯ ಹಾನಿ ಅಥವಾ ಅಪಾಯ ಸಂಭವಿಸಿಲ್ಲ. ಈ ಪ್ರದೇಶವು ಭೌಗೋಳಿಕವಾಗಿ ಸುರಕ್ಷಿತ ಭೂಕಂಪನ ವಲಯದಲ್ಲಿದ್ದು, ಟೆಕ್ಟಾನಿಕ್ ನಕ್ಷೆಯ ಪ್ರಕಾರ ಯಾವುದೇ ರೀತಿಯ ರಚನಾತ್ಮಕ ಅಡಚಣೆಗಳಿಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ ಆತಂಕಪಡುವ ಅಗತ್ಯವಿಲ್ಲ ಎಂದು KSNDMC ನಿರ್ದೇಶಕರು ಅಭಯ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!