LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಬೆಂಗಳೂರಲ್ಲಿ ಯುವತಿ ಕಿಡ್ನಾಪ್ & ಸರಣಿ ಅಪಘಾತ : 35ಕ್ಕೂ ಹೆಚ್ಚು ಕಾರುಗಳು ಜಖಂ, 6 ಜನರಿಗೆ ಗಂಭೀರ ಗಾಯ!

ಬೆಂಗಳೂರು: ರಾಜಸ್ಥಾನ ಮೂಲದ ಪೂಜಾ ಮತ್ತು ಓಂ ಪ್ರಕಾಶ್ ಎಂಬ ಪ್ರೇಮಿಗಳು ಕುಟುಂಬದ ವಿರೋಧದ ನಡುವೆಯೂ 9 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಈ ಪ್ರೇಮ ವಿವಾಹ ಪೂಜಾ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಹೀಗಾಗಿ ಯುವತಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಲು ಪೋಷಕರು ನಾಲ್ವರ ತಂಡವನ್ನು ಕಳುಹಿಸಿಕೊಟ್ಟಿದ್ದರು. ನಿನ್ನೆ ರಾತ್ರಿ ಈ ನಾಲ್ವರ ಗ್ಯಾಂಗ್ ಮನೆಗೆ ನುಗ್ಗಿ ಪೂಜಾಳನ್ನು ಬಲವಂತವಾಗಿ ಕಿಡ್ನಾಪ್ ಮಾಡಲು ಯತ್ನಿಸಿದೆ.

ಯುವತಿಯ ಕಿರುಚಾಟ ಕೇಳಿ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಜಾಗೃತರಾಗಿ ಕಾರನ್ನು ತಡೆಯಲು ಯತ್ನಿಸಿದ್ದಾರೆ. ಸಾರ್ವಜನಿಕರ ರೊಚ್ಚಿಗೆದರಿ ಆತಂಕಗೊಂಡ ಕಿಡ್ನಾಪರ್ಸ್ ತಂಡದ ಕಾರು ಚಾಲಕ ಸದ್ದಾಂ, ಅಲ್ಲಿಂದ ತಪ್ಪಿಸಿಕೊಳ್ಳುವ ಹಠದಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ. ಈ ರಭಸದಲ್ಲಿ ಪೊಲೀಸ್ ವಾಹನ ಸೇರಿದಂತೆ 35ಕ್ಕೂ ಹೆಚ್ಚು ವಾಹನಗಳಿಗೆ ಹಾಗೂ 100ಕ್ಕೂ ಹೆಚ್ಚು ಬೈಕ್‌ಗಳಿಗೆ ಭೀಕರವಾಗಿ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ್ದಾನೆ.

ಈ ಭೀಕರ ಅಪಘಾತದ ಪರಿಣಾಮವಾಗಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಜಯಲಕ್ಷ್ಮಿ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಸ್ತುತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ತಕ್ಷಣವೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಕಿಡ್ನಾಪರ್ಸ್‌ಗಳಲ್ಲೊಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!