ನವದೆಹಲಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕಕ್ಕೆ ತೀವ್ರ ಹಿನ್ನಡೆಯಾಗಿದೆ. ವಿನೀತ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ, ತೀವ್ರ ಬರದ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕ ಸರ್ಕಾರಕ್ಕೆ ಸ್ಪಷ್ಟ ಆದೇಶ ನೀಡಿದೆ.
ರಾಜ್ಯದಲ್ಲಿ ಮಳೆಯ ಅಭಾವದಿಂದ ಅಣೆಕಟ್ಟುಗಳಲ್ಲಿ ನೀರಿಲ್ಲದೆ ತೀವ್ರ ಕುಡಿಯುವ ನೀರಿನ ಅಭಾವ ತಲೆದೋರಿದೆ ಎಂದು ಕರ್ನಾಟಕದ ಪ್ರತಿನಿಧಿಗಳು ಸಭೆಯಲ್ಲಿ ಸುದೀರ್ಘವಾಗಿ ವಾದ ಮಂಡಿಸಿದರು. ಆದರೆ, ಕರ್ನಾಟಕದ ಈ ಮನವಿ ಮತ್ತು ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ ಸಮಿತಿಯು, ತಮಿಳುನಾಡಿನ ಕುರುವೈ ಬೆಳೆಗೆ ನೀರಿನ ಅಗತ್ಯವಿದೆ ಎಂಬ ವಾದವನ್ನು ಎತ್ತಿಹಿಡಿದು ಈ ಆಘಾತಕಾರಿ ತೀರ್ಪು ನೀಡಿದೆ. ಸಮಿತಿಯ ಈ ಏಕಪಕ್ಷೀಯ ಆದೇಶವು ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಿಡಿಲಾಸಾತದಂತೆ ಎರಗಿದೆ.