LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ನಾಳೆ ನಂದಿನಿ ಹಾಲಿನ ದರ ಏರಿಕೆ ಕುರಿತು ಮಹತ್ವದ ಸಭೆ : ಪ್ರತಿ ಲೀ.ಗೆ 46 ರಿಂದ 51 ರೂ.ಏರಿಕೆ ಸಾಧ್ಯತೆ!

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆಯ ಬಿಸಿ ತಗಲುವ ಸಾಧ್ಯತೆಯಿದೆ. ಹಾಲಿನ ದರ ಹೆಚ್ಚಳದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಾಳೆ ಅತ್ಯಂತ ಮಹತ್ವದ ಸಭೆಯನ್ನು ಕರೆದಿದೆ. ರೈತರ ಹಿತದೃಷ್ಟಿ ಹಾಗೂ ನಿರ್ವಹಣಾ ವೆಚ್ಚದ ನೆಪದಲ್ಲಿ ಪ್ರತಿ ಲೀಟರ್ ಹಾಲಿನ ದರವನ್ನು ಹೆಚ್ಚಿಸಲು ಹಾಲು ಒಕ್ಕೂಟಗಳು ಸಜ್ಜಾಗಿದ್ದು, ನಾಳೆಯ ಸಭೆಯಲ್ಲಿ ಈ ಕುರಿತು ಪ್ರಮುಖ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.

ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸುವಂತೆ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್‌ಗೆ ಮನವಿ ಸಲ್ಲಿಸಿವೆ. ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಒಕ್ಕೂಟಗಳ ಪದಾಧಿಕಾರಿಗಳು ಮನವಿ ಪತ್ರ ನೀಡಿದ್ದಾರೆ. ನಾಳೆ ನಡೆಯಲಿರುವ ಕೆಎಂಎಫ್ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದ್ದು, ಪ್ರತಿ ಲೀಟರ್‌ಗೆ 4 ರಿಂದ 6 ರೂಪಾಯಿವರೆಗೆ ದರ ಹೆಚ್ಚಳ ಮಾಡಲು ತೀರ್ಮಾನಿಸುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರಕ್ಕೂ ಹಾಲಿನ ದರ ಏರಿಕೆಯ ಕುರಿತು ಸಕಾರಾತ್ಮಕ ಒಲವಿರುವುದು ಒಕ್ಕೂಟಗಳಿಗೆ ಮತ್ತಷ್ಟು ಬಲ ತಂದಿದೆ.

ಸಭೆಯಲ್ಲಿ ದರ ಏರಿಕೆಯ ಕುರಿತು ಅಂತಿಮ ನಿರ್ಣಯ ಕೈಗೊಂಡ ಬಳಿಕ, ಆ ಪ್ರಸ್ತಾವನೆಯನ್ನು ಕೆಎಂಎಫ್‌ ರಾಜ್ಯ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಡಲಿದೆ. ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆಗೆ ಅಂತಿಮ ಮುದ್ರೆ ಬಿದ್ದ ಬಳಿಕ ಅಧಿಕೃತ ಆದೇಶ ಹೊರಬೀಳಲಿದೆ. ಪ್ರಸ್ತುತ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 46 ರೂಪಾಯಿ ಇದ್ದು, ಒಂದು ವೇಳೆ ದರ ಏರಿಕೆಗೆ ಸರ್ಕಾರ ಸಮ್ಮತಿಸಿದರೆ ಲೀಟರ್ ಹಾಲಿನ ಬೆಲೆ 50 ರಿಂದ 51 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಇದು ಸಾಮಾನ್ಯ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್