LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರ ಮೇಲೆ ವ್ಯಕ್ತಿಯಿಂದ ಆಸಿಡ್ ದಾಳಿ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ 6 ತಿಂಗಳ ಮಗು ಸೇರಿ ಕುಟುಂಬ ಐವರ ಮೇಲೆ ಆಸಿಡ್ ದಾಳಿ ನಡೆಸಿ ಅತ್ಟಹಾಸ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ತಾರಿಹಾಳ ವಾಜಪೇಯಿ ನಗರದಲ್ಲಿ ಈ ಘಟನೆ ನಡೆದಿದೆ. ನಾದಿನಿಯರ ಫೋಟೋ ಕ್ಲಿಕ್ಕಿಸಿದ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ ಆರಂಭವಾಗಿದ್ದು, ಈ ವೇಳೆ ಕೋಪದ ಬರದಲ್ಲಿ ಪತಿ ಮಹಾಶಯ ಸ್ಥಳದಲ್ಲಿದ್ದ ಎಲ್ಲರ ಮೇಲೆ ಎಸಿಡ್ ಎರಚಿದ್ದಾನೆ. ಘಟನೆಯಲ್ಲಿ 6 ತಿಂಗಳ ಮಗು, ಪತ್ನಿ, ನಾದಿನಿಯರು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುರೇಶ್ ಬೈಲ್ ಪತ್ತಾರ (33)ಎಂಬಾತ ಆಸಿಡ್ ಎರಚಿರುವ ಆರೋಪಿ. ರಾಜೇಶ್ವರಿ (24) ಅವರ ಸ್ಥಿತಿ ತೀವ್ರ ಗಂಭೀರವಾಗಿದೆ. 6 ತಿಂಗಳ ಮಗುವಿನ ಮುಖ, ಬಾಯಿಗೂ ಆಸಿಡ್ ತಗುಲಿ ಗಾಯಗಳಾಗಿವೆ. ಶೃತಿ ಹಾಗೂ ರೇಷ್ಮಾ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಸಿಡ್ ಎರಚುವಾಗ ಸುರೇಶ್ ಗೂ ಆಸಿಡ್ ತಗುಲಿ ಗಾಯಗಲಾಗಿವೆ.

ನಾದಿನಿಯರ ಫೋಟೋ ವಿಚಾರವಾಗಿ ಸುರೇಶ್ ಹಾಗೂ ಪತ್ನು ರಾಜೇಶ್ವರಿ ನಡುವೆ ಜಗಳವಾಗಿತ್ತು. ರಾಜೇಶ್ವರಿ ಪತಿಗೆ ನಾದಿನಿಯರ ಫೋಟೋ ತೆಗೆಯದಮ್ತೆ ತಾಕೀತು ಮಾಡಿದ್ದಳು. ಆದರೂ ಕೇಳದ ಪತಿ ಸುರೇಶ್ ನಾದಿನಿಯರ ಫೋಟೋ ಕ್ಲಿಕ್ಕಿಸಿ ಕಿರಿಕ್ ಮಾಡಿದ್ದ. ಇದೇ ವಿಚಾರವಾಗಿ ಪತಿ-ಪತ್ನಿ ಜಗಳ ವಿಕೋಪಕ್ಕೆ ತಿರುಗಿದೆ.

ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್ ನಿಂದ ಸುರೇಶ್ ಐವರ ಮೇಲೆ ದಾಳಿ ನಡೆಸಿದ್ದಾನೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!