LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಎಲ್ಲೆಲ್ಲಿ ಫಾರ್ಮ್ 7 ಕೊಟ್ಟಿದ್ದಾರೆ 12 ಗಂಟೆ ಒಳಗೆ ಮಾಹಿತಿ ಕೊಡಿ : SIR ಬಗ್ಗೆ ರಾಜ್ಯದ ಜನರಿಗೆ ಡಿಕೆಶಿ ಸಂದೇಶ!

ಬೆಂಗಳೂರು: ರಾಜ್ಯದಲ್ಲಿ ವಿಶೇ‍ಷ ಸಂಕ್ಷಿಪ್ತ ಪರಿಷ್ಕರಣೆ (SIR) ನೆಪದಲ್ಲಿ ದಲಿತರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ದೊಡ್ಡ ಮಟ್ಟದ ಕುತಂತ್ರ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಎಲ್ಲೆಲ್ಲಿ ಅಕ್ರಮವಾಗಿ ಫಾರ್ಮ್ 7 ಸಲ್ಲಿಕೆ ಮಾಡಲಾಗಿದೆಯೋ ಆ ಎಲ್ಲಾ ವಿವರಗಳನ್ನು ಮುಂದಿನ 12 ಗಂಟೆಗಳ ಒಳಗಾಗಿ ತಮಗೆ ತಲುಪಿಸುವಂತೆ ಪಕ್ಷದ ಬಿಎಲ್‌ಎ (BLA) ಹಾಗೂ ಬಿಎಲ್‌ಓ (BLO) ಗಳಿಗೆ ತುರ್ತು ಮನವಿ ಮಾಡಿದ್ದಾರೆ.

ದೇಶಾದ್ಯಂತ ಅನುಷ್ಠಾನಗೊಳ್ಳುತ್ತಿರುವ ಎಸ್‌ಐಆರ್ ಪದ್ಧತಿಯಿಂದಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುದೊಡ್ಡ ಆತಂಕ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಈಗಾಗಲೇ 1 ಕೋಟಿಗೂ ಹೆಚ್ಚು ಮತಗಳು ನಾನಾ ಕಾರಣಗಳಿಂದ ಕಡಿಮೆಯಾಗಿರುವುದನ್ನು ಉಲ್ಲೇಖಿಸಿದ ಸಿಎಂ, ಸುಮಾರು 50 ಲಕ್ಷಕ್ಕೂ ಅಧಿಕ ಜನರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ. ಪ್ರಜಾಸೇವಕನಾಗಿ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸಲು ಶ್ರಮಿಸುತ್ತಿದ್ದರೂ, ಇದನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಿಲ್ಲ ಎಂಬುದನ್ನು ತಾವು ಮುಕ್ತವಾಗಿ ಒಪ್ಪಿಕೊಳ್ಳುವುದಾಗಿ ತಿಳಿಸಿದ್ದಾರೆ.

ಬಿಜೆಪಿ ನಾಯಕರ ನೇರ ನಿರ್ದೇಶನದ ಮೇರೆಗೆ ಸೋತ ಅಭ್ಯರ್ಥಿಗಳು ಮತ್ತು ಸ್ಥಳೀಯ ಮುಖಂಡರು ಕಾಂಗ್ರೆಸ್ ಹಾಲಿ ಶಾಸಕರಿರುವ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ವಿಶೇಷವಾಗಿ ಈಶ್ವರ್ ಖಂಡ್ರೆ ಅವರ ಭಾಲ್ಕಿ, ನಯನ ಮೋಟಮ್ಮ ಅವರ ಮುದಿಗೆರೆ ಹಾಗೂ ತನ್ವೀರ್ ಸೇಠ್ ಅವರ ನರಸಿಂಹರಾಜ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಅಲ್ಪಸಂಖ್ಯಾತರು ಮತ್ತು ದಲಿತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಫಾರ್ಮ್ 7 ಅನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಮತ ಹಕ್ಕು ಕಸಿಯುವವರ ವಿರುದ್ಧ ತಕ್ಷಣವೇ ಕ್ರಿಮಿನಲ್ ತನಿಖೆ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಕುರಿತು ಅಕ್ಟೋಬರ್ 2ರಂದು (ನಾಳೆ) ತಾವು ಖುದ್ದಾಗಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾಗಿ ಸೂಕ್ತ ದಾಖಲೆಗಳೊಂದಿಗೆ ದೂರು ನೀಡಲಿದ್ದು, ಅಕ್ರಮವನ್ನು ಬಯಲಿಗೆಳೆಯಲು ತೀರ್ಮಾನಿಸಿದ್ದಾರೆ. ಆದ್ದರಿಂದ ಬಿಎಲ್‌ಎ 1, ಬಿಎಲ್‌ಎ 2 ಹಾಗೂ ಬಿಎಲ್‌ಓಗಳು ತಮ್ಮ ಬಳಿ ಇರುವ ಫಾರ್ಮ್ 7 ಗೆ ಸಂಬಂಧಿಸಿದ ಎಲ್ಲಾ ನಿಖರ ಮಾಹಿತಿ ಮತ್ತು ದಾಖಲೆಗಳನ್ನು ತಕ್ಷಣವೇ [email protected] ಇಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಸಿಎಂ ಸೂಚಿಸಿದ್ದಾರೆ. ರಾಜ್ಯದ ನಾಗರಿಕರು ಹಾಗೂ ಪಕ್ಷದ ಕಾರ್ಯಕರ್ತರು ಈ ಜಾಲದ ವಿರುದ್ಧ ಜಾಗೃತರಾಗಿರಬೇಕು ಎಂದು ಅವರು ಕರೆ ನೀಡಿದ್ದಾರೆ.

https://twitter.com/i/status/2105507064835711359

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?