ದಾವಣಗೆರೆ: ಅಡಿಕೆ ತೋಟದಲ್ಲಿ ಸಿಲಿಂಡರ್ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆಯ ಹೆಚ್.ಕಲ್ಪನಹಳ್ಳಿಯಲ್ಲಿರುವ ಅಡಿಕೆ ತೋಟದಲ್ಲಿ ದೊಗ್ಗಳ್ಳಿ ಶಿವಕುಮಾರ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಎಂಬಾತ ಸಿಲಿಂದರ್ ಗಳನ್ನು ಸಂಗ್ರಹಿಸಿಡುತ್ತಿದ್ದರು. ಇಂದು ಮಧ್ಯಾಹ್ನ 8-10 ಸಿಲಿಂಡರ್ ಗಳು ಏಕಏಕಿ ಸ್ಫೋಟಗೊಂಡಿವೆ.
ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಬ್ಧಗಧಗನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಅನಿಲ್ ಹಾಗೂ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಮ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮಾಹಿತಿ ಪ್ರಕಾರ ದೊಗ್ಗಳ್ಳಿ ಶಿವಕುಮಾರ್ ಅವರಿಗೆ ಸೇರಿದ ಗೋಡೌನ್ ನಲ್ಲಿ ಅನಿಲ್ ಅಕ್ರಮವಾಗಿ ಸಿಲಿಂಡರ್ ಸಂಗ್ರಹಿಸಿಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.