LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್‌ಗೆ ಬರೋಬ್ಬರಿ ₹89 ಕೋಟಿ ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ (ಗೋಲ್ಡ್ ಸ್ಮಗ್ಲಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಕಸ್ಟಮ್ಸ್ ಇಲಾಖೆ ಭಾರೀ ಶಾಕ್ ನೀಡಿದ್ದು, ಬರೋಬ್ಬರಿ ₹89 ಕೋಟಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಕಸ್ಟಮ್ಸ್ ಅಧಿಕಾರಿ ಸಂದೀಪ್ ಅವರು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಮಾಹಿತಿಯನ್ನು ಈಗಾಗಲೇ ರನ್ಯಾ ರಾವ್ ಅವರಿಗೆ ತಲುಪಿಸಲಾಗಿದೆ. 2024ರ ಮಾರ್ಚ್ 7 ರಿಂದ 2025ರ ಫೆಬ್ರವರಿವರೆಗಿನ ಒಂದು ವರ್ಷದ ಅವಧಿಯಲ್ಲಿ ಸುಮಾರು 113 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಕೃತ್ಯದಲ್ಲಿ ನಟಿಯ ಭಾಗಿಯಾಗುವಿಕೆ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ದುಬೈನಿಂದ ಅಕ್ರಮವಾಗಿ ಚಿನ್ನ ತಂದು ಭಾರತದಲ್ಲಿ ಜಾಲ ವಿಸ್ತರಿಸಿದ್ದ ರನ್ಯಾ ರಾವ್, ಸಹ ಆರೋಪಿಗಳಾದ ತರುಣ್ ಸೇರಿದಂತೆ ಇತರ ಮೂವರ ಜೊತೆಗೂಡಿ ಈ ಬೃಹತ್ ಚಿನ್ನದ ವ್ಯವಹಾರ ನಡೆಸಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ನಡೆಸಿದ ಸುದೀರ್ಘ ಕಾರ್ಯಾಚರಣೆ ಹಾಗೂ ಬಂಧನದ ಬಳಿಕ ಈ ಅಂತರರಾಷ್ಟ್ರೀಯ ಸ್ಮಗ್ಲಿಂಗ್ ಜಾಲದ ಸಂಪೂರ್ಣ ಜಾತಕ ಹೊರಬಂದಿದ್ದು, ಇಲಾಖೆಯು ಇಷ್ಟೊಂದು ದೊಡ್ಡ ಮೊತ್ತದ ದಂಡ ವಿಧಿಸಿರುವುದು ತನಿಖೆಯಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!