LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಬೆಂಗಳೂರು CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಟ್ರಾಲಿ ಬ್ಯಾಗ್ ನಲ್ಲಿ ಅಡಗಿಸಿಟ್ಟಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ನೈಜೀರಿಯನ್ ಪ್ರಜೆಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಗೇಜ್ ಟ್ರ್ಯಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟು ಡ್ರಗ್ಸ್ ಸಾಗಿಸುತ್ತಿದ್ದ ಮೂವರು ನೈಜೀರಿಯಾ ಮೂಲದ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ (MDMA) ಕ್ರಿಸ್ಟಲ್, 4 ಮೊಬೈಲ್ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದರು. ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಮೆಡಿಕಲ್ ಮತ್ತು ಟೂರಿಸ್ಟ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ನೈಜೀರಿಯಾದಿಂದ ಬೇರೆ ಪೆಡ್ಲರ್ ಗಳಿಂದ ಎಂಡಿಎಂಎ ಕ್ರಿಸ್ಟಲ್ ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದರು.

ಬಾಡಿಗೆ ಮನೆಯಲ್ಲಿ ವಾಸವಾಗಿ, ಡ್ರಗ್ಸ್ ಸಂಗ್ರಹಿಸಿಟ್ತುಕೊಂಡು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅನಧಿಕೃತವಾಗಿ ವಾಸವಾಗಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಸದ್ಯ ಆರೋಪಿಗಳನ್ನ ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!