LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಮಂಗಳೂರು ಏರ್ ಪೋರ್ಟ್’ಗೆ CM ದಳಪತಿ ವಿಜಯ್ ಆಗಮನ ; ನೋಡಲು ಮುಗಿಬಿದ್ದ ಫ್ಯಾನ್ಸ್ |WATCH VIDEO

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ದಳಪತಿ ವಿಜಯ್ ಅವರು ಶುಕ್ರವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದರು. ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ವಿಮಾನ ನಿಲ್ದಾಣದ ಹೊರಭಾಗದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದು, ವಿಜಯ್‌ರನ್ನು ಕಂಡ ಕೂಡಲೇ ಸಂಭ್ರಮಾಚರಣೆ ನಡೆಸಿದರು.

ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಅಭಿಮಾನಿಗಳ ದಟ್ಟಣೆ ಹೆಚ್ಚಾಗಿದ್ದರಿಂದ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು. ವಿಜಯ್ ಪರ ಘೋಷಣೆಗಳು ಮೊಳಗಿದರೆ, ಹಲವರು ಅವರೊಂದಿಗೆ ಫೋಟೋ ಹಾಗೂ ವಿಡಿಯೋ ಸೆರೆಹಿಡಿಯಲು ಮುಂದಾದರು.

ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದಾರೆ.ಅವರ ಭೇಟಿ ಹಿನ್ನೆಲೆ ದೇವಸ್ಥಾನ ಹಾಗೂ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಲೂರು ದೇವಸ್ಥಾನಕ್ಕೆ ತೆರಳಿ ಸಿಎಂ ವಿಜಯ್ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ವಿಜಯ್ ಅವರ ಅಪಾರ ಅಭಿಮಾನಿ ಬಳಗ ಕರ್ನಾಟಕದಲ್ಲಿಯೂ ಇರುವುದರಿಂದ ಅವರ ಆಗಮನ ಎಲ್ಲೆಡೆ ಕುತೂಹಲಕ್ಕೆ ಕಾರಣವಾಯಿತು. ಅಭಿಮಾನಿಗಳ ಸುರಕ್ಷತೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಪೊಲೀಸರು ವಿಶೇಷ ಕ್ರಮಗಳನ್ನು ಕೈಗೊಂಡಿದ್ದರು.

https://twitter.com/ANI/status/2065346038597382425/video/1

https://twitter.com/ANI/status/2065346038597382425/video/1

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!