LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್‌ ಕನ್ನಾಳೆಯ 13 ಬ್ಯಾಂಕ್‌ ಖಾತೆ ಫ್ರೀಜ್‌; 63 ಲಕ್ಷ ಹಣ ಜಪ್ತಿ ಮಾಡಿದ CID

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಸೇರಿದಂತೆ ವಿವಿಧ ನೇಮಕಾತಿಗಳಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಪ್ರಕರಣದಲ್ಲಿ, ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ್ ಗಂಗ್ವಾರ್ ಹಾಗೂ ಬಸವರಾಜ ಕನ್ನಾಳೆಯ ನಿಕಟ ಬಾಂಧವ್ಯ ಸಿಐಡಿ (CID) ತನಿಖೆಯಿಂದ ಬಹಿರಂಗವಾಗಿದೆ. 2024ರಲ್ಲಿ ಗಂಗ್ವಾರ್ ಅವರು ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಅವರ ಹಳೆಯ ಗೆಳೆಯ ಕನ್ನಾಳೆ ಅಕ್ರಮದ ಜಾಲ ಹೆಣೆದಿದ್ದ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಭ್ಯರ್ಥಿಗಳೊಂದಿಗೆ ಡೀಲ್ ಕುದುರಿಸಲು ಅಧಿಕಾರಿಯ ಮನವೊಲಿಸುವಲ್ಲಿ ಕನ್ನಾಳೆ ಯಶಸ್ವಿಯಾಗಿದ್ದು, ಗಂಗ್ವಾರ್ ಅವರ ದೆಹಲಿ ಮತ್ತು ಉತ್ತರ ಪ್ರದೇಶದ ವಿಮಾನ ಪ್ರಯಾಣಕ್ಕಾಗಿ ಸುಮಾರು 11 ಲಕ್ಷ ರೂಪಾಯಿ ಭರಿಸಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಐಎಎಸ್ ಅಧಿಕಾರಿಯನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದ ಕನ್ನಾಳೆ, ಅಧಿಕಾರಿಯ ಮನೆಗೆ ಹಲವು ಬಾರಿ ಭೇಟಿ ನೀಡಿ ನೇಮಕಾತಿಯ ಡೀಲ್ ಕುರಿತು ಚರ್ಚೆ ನಡೆಸುತ್ತಿದ್ದ. ಅಧಿಕಾರಿಯ ಸಕಲ ಇಷ್ಟಾರ್ಥಗಳನ್ನು ಪೂರೈಸಿ ಆತನ ಸಂಪೂರ್ಣ ವಿಶ್ವಾಸ ಗಳಿಸಿಕೊಂಡಿದ್ದ ಈತ, ಪಶುವೈದ್ಯಾಧಿಕಾರಿ ಹುದ್ದೆ ಸೇರಿದಂತೆ ವಿವಿಧ ಹಂತದ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪೀಡಿಸಲು ಯೋಜಿಸಿದ್ದ. ತನಿಖೆ ತೀವ್ರಗೊಳ್ಳುತ್ತಿದ್ದಂತೆ ಅಧಿಕಾರಿ ಮತ್ತು ದಲ್ಲಾಳಿಯ ನಡುವಿನ ಹಣಕಾಸಿನ ವ್ಯವಹಾರಗಳ ಕರಾಳ ಮುಖಗಳು ಒಂದೊಂದಾಗಿ ಹೊರಬರುತ್ತಿವೆ.

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ತನಿಖೆಯನ್ನು ಸಿಐಡಿಗೆ ವಹಿಸುತ್ತಿದ್ದಂತೆಯೇ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನೂ ಆಗಿದ್ದ ಬಸವರಾಜ ಕನ್ನಾಳೆ ತೀವ್ರ ಆತಂಕಕ್ಕೊಳಗಾಗಿದ್ದ. ತನ್ನ ಅತ್ಯಾಪ್ತ ರಾಜಕಾರಣಿಗಳಿಂದಲೂ ರಕ್ಷಣೆ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಭಾರತದಿಂದ ಕಾಲ್ಕಿಳಿಯಲು ಸಂಚು ರೂಪಿಸಿದ್ದ. ಇದಕ್ಕಾಗಿ ಕಜಕಿಸ್ತಾನದಲ್ಲಿ ಒಂದು ತಿಂಗಳ ಕಾಲ ವಾಸ್ತವ್ಯ ಹೂಡಲು ವೀಸಾವನ್ನೂ ಪಡೆದುಕೊಂಡಿದ್ದ. ಆದರೆ, ಹೊಸದಿಲ್ಲಿಯಿಂದ ಕಜಕಿಸ್ತಾನಕ್ಕೆ ಪರಾರಿಯಾಗಲು ಸಜ್ಜಾಗಿದ್ದಾಗ ಆತನ ಜಾಡು ಪತ್ತೆ ಹಚ್ಚಿದ ಸಿಐಡಿ ತನಿಖಾ ತಂಡ, ದೆಹಲಿಯಲ್ಲಿ ಆತನನ್ನು ಯಶಸ್ವಿಯಾಗಿ ಬಂಧಿಸಿದೆ.

ಅಕ್ರಮದ ಕಿಂಗ್‌ಪಿನ್ ಕನ್ನಾಳೆ ಅಭ್ಯರ್ಥಿಗಳಿಂದ ಸಂಗ್ರಹಿಸುತ್ತಿದ್ದ ಹಣವನ್ನು ಬೇನಾಮಿ ಖಾತೆಗಳಿಗೆ ವರ್ಗಾಯಿಸುತ್ತಿದ್ದ. ಅಕ್ರಮ ಹಣದ ವಹಿವಾಟಿಗಾಗಿ ಬೀದರ್‌ನ ಓಂ ಶ್ರೀ ಲಕ್ಷ್ಮಿ ಸೌಹಾರ್ದ ಸೊಸೈಟಿ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ಕನ್ನಾಳೆ ನಿರ್ವಹಿಸುತ್ತಿದ್ದ 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ರೂಪಾಯಿ ಹಣವನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದಲ್ಲದೆ, ಆತನ ಸಂಜಯನಗರದ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸಿದಾಗ ಸಿಕ್ಕಿದ್ದ 3 ಲಕ್ಷ ರೂಪಾಯಿ ನಗದನ್ನೂ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಆಳವಾದ ತನಿಖೆ ಮುಂದುವರಿದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?