LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಸರ್ಕಾರದಿಂದ ಅನುದಾನ ಬಿಡುಗಡೆಯಾಗದೆ ಸಂಕಷ್ಟ: KRIDL ಅಧಿಕಾರಿ ನಾಪತ್ತೆ, ಡೆತ್‌ನೋಟ್‌ ಬರೆದಿಟ್ಟು ಆತಂಕ!

ಗದಗ: ರಾಜ್ಯ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (KRIDL) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಫರ್ವೀಜ್ ಎಂಬುವರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮೇಲಾಧಿಕಾರಿಗಳಿಗೆ ಕಾರುಣಿಕ ಪತ್ರ ಬರೆದಿಟ್ಟು ಅವರು ದಿಢೀರ್ ನಾಪತ್ತೆಯಾಗಿದ್ದು, ಇಡೀ ಸರ್ಕಾರಿ ವಲಯ ಹಾಗೂ ಅವರ ಕುಟುಂಬಸ್ಥರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ.

ಸಬ್‌-ಗುತ್ತಿಗೆದಾರರಿಗೆ ನೀಡಬೇಕಾದ ಹಣ ಸರ್ಕಾರದಿಂದ ತಲುಪದ ಕಾರಣ, ದಿನನಿತ್ಯ ಗುತ್ತಿಗೆದಾರರು ಫರ್ವೀಜ್ ಅವರ ಮನೆ ಮುಂದೆ ಬಂದು ಗಲಾಟೆ ಮಾಡುತ್ತಿದ್ದರೆನ್ನಲಾಗಿದೆ. ಅಷ್ಟೇ ಅಲ್ಲದೆ, ಗುತ್ತಿಗೆದಾರರು ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಗೂ ಕಿರುಕುಳ ನೀಡುತ್ತಿದ್ದುದರಿಂದ ಅವರ ಮಾನಸಿಕ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಎಲ್ಲಾ ಬೆಳವಣಿಗೆಗಳಿಂದ ತೀವ್ರ ನಿರಾಶೆಗೊಂಡಿದ್ದ ಅವರು, ಬೆಂಗಳೂರಿನ KRIDL ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ (EE) ಸುದೀರ್ಘ ಪತ್ರ ಬರೆದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅವರು ಬರೆದಿರುವ ಪತ್ರದಲ್ಲಿ, "ಸರ್ಕಾರದಿಂದ ಅನುದಾನ ಬಿಡುಗಡೆಯಾಗದೆ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದೆ ನಾನು ಸೋತಿದ್ದೇನೆ. ನನ್ನ ಜೀವನವನ್ನೇ ಕೊನೆಗಾಣಿಸುತ್ತಿದ್ದು, ನನ್ನ ಸಾವಿಗೆ ನಾನೇ ಕಾರಣ. ಗದಗ ಉಪವಿಭಾಗಕ್ಕೆ ತಕ್ಷಣವೇ ಅನುದಾನ ಬಿಡುಗಡೆ ಮಾಡಿ ಸಮಸ್ಯೆಯನ್ನು ಬಗೆಹರಿಸಿ, ಬೇರೊಬ್ಬ ಎಇಇ ಅಧಿಕಾರಿಯನ್ನು ನಿಯೋಜಿಸಿ. ದಯವಿಟ್ಟು ನನ್ನ ಕುಟುಂಬದವರಿಗೆ ಯಾರೂ ಕಿರುಕುಳ ನೀಡಬೇಡಿ" ಎಂದು ಮನಕಲಕುವ ರೀತಿಯಲ್ಲಿ ವಿನಂತಿಸಿಕೊಂಡಿದ್ದಾರೆ.

ಘಟನೆಯ ಹಿನ್ನೆಲೆಯನ್ನು ಗಮನಿಸುವುದಾದರೆ, ಸೆಪ್ಟೆಂಬರ್ 12ರಂದು ಇಇ ಅವರಿಗೆ ಪತ್ರ ಬರೆದಿದ್ದ ಫರ್ವೀಜ್, ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಮುಖ್ಯ ಸಭೆಯಿದೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ಆದರೆ, ಸೆಪ್ಟೆಂಬರ್ 16ರ ನಂತರ ಅವರ ಯಾವುದೇ ಸುಳಿವು ಸಿಗದೇ ನಾಪತ್ತೆಯಾಗಿದ್ದಾರೆ. ಪತ್ನಿ, ಮಗಳು, ವೃದ್ಧ ತಂದೆ-ತಾಯಿ ಹಾಗೂ ಸಹೋದರರನ್ನು ಅಗಲಿರುವ ಅಧಿಕಾರಿಯ ದಿಢೀರ್ ನಾಪತ್ತೆಯಿಂದ ಕುಟುಂಬಸ್ಥರು ಸಂಪೂರ್ಣ ಕಂಗಾಲಾಗಿದ್ದು, ಅವರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಪತ್ತೆಹಚ್ಚಿಕೊಡುವಂತೆ ಕಣ್ಣೀರಿಡುತ್ತಾ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ರದಲ್ಲಿ ಆತ್ಯಹತ್ಯೆಯ ಮುನ್ಸೂಚನೆ ನೀಡಿ ನಾಪತ್ತೆಯಾಗಿರುವ ಅಧಿಕಾರಿಯನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿದ್ದು, ತೀವ್ರ ಶೋಧ ಕಾರ್ಯವನ್ನು ಆರಂಭಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!