LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಬೆಳಗಾವಿಯಲ್ಲಿ ಮತ್ತೆ MES ಪುಂಡಾಟ: ಜಿಲ್ಲಾಧಿಕಾರಿ ಕಚೇರಿ ಮುಂದೆ ‘ಕನ್ನಡ ಕಡ್ಡಾಯ’ ಸರ್ಕಾರದ ಆದೇಶವನ್ನು ಹರಿದು ಉದ್ಧಟತ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ (ಮಹಾರಾಷ್ಟ್ರ ಏಕಿಕರಣ ಸಮಿತಿ)​ ಮತ್ತೆ ಪುಂಡಾಟ ಮೆರೆದಿದೆ. ರಾಜ್ಯ ಸರ್ಕಾರದ ಕನ್ನಡ ಕಡ್ಡಾಯ ಆದೇಶ ವಿರೋಧಿಸಿ ಪೊಲೀಸರ ಎದುರಲ್ಲೇ ಹುಚ್ಚಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಆದೇಶವನ್ನು ಹರಿದು ಉದ್ಧಟತನ ಮೆರೆದಿದ್ದಾರೆ. ಮರಾಠಿ ಭಾಷೆಯಲ್ಲಿ ನಾಮಫಲಕ, ದಾಖಲೆಗಳನ್ನು ನೀಡುವಂತೆ ಪ್ರತಿಭಟಿಸಿದ್ದಾರೆ.

ಕನ್ನಡ ಕಡ್ಡಾಯ ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಕ್ಯಾತೆ ತೆಗೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ದಾದಾಗಿರಿ ನಡೆಯುವುದಿಲ್ಲ. ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ, ಬೀದರ್ ಹಾಗೂ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಎಂಇಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಇದೇ ವೇಳೆ ಎಂಇಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಂಇಎಸ್ ಪುಂಡರನ್ನ ಬಂಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರಿಂದ ನಗರದ ಎಸ್​​​ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಎಂಇಎಸ್ ಪುಂಡರು ಡಿಸಿ ಕಚೇರಿ ಆವರಣದಲ್ಲೇ ಸರ್ಕಾರದ ಆದೇಶದ ಪ್ರತಿಗಳನ್ನು ಹರಿದು ಹಾಕುತ್ತಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಎಂಇಎಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆಯನ್ನು ನಿಷೇಧಿಸಬೇಲು ಎಂದು ಆಗ್ರಹಿಸಿದ್ದಾರೆ. ಬಳಿಕ ಮೆರವಣಿಗೆಯಲ್ಲಿ ಸಾಗಿ ಬೆಳಗಾವಿ ಎಸಿಗೆ ಮನವಿ ಸಲ್ಲಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!