LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ‘NEET’ ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಬ್ಯಾನ್ : ಕೇಂದ್ರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ..!

ನವದೆಹಲಿ : ದೇಶದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್-ಯುಜಿ (NEET-UG 2026) ಮರುಪರೀಕ್ಷೆಯ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಮ್ ಆ್ಯಪ್‌ಗೆ ಜೂನ್ 22ರವರೆಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠದ ಮುಂದೆ ಪ್ರಕರಣ ಪ್ರಸ್ತಾಪವಾಗಿದ್ದು, ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ಇಂದು ಈ ಕುರಿತು ಮಹತ್ವದ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಕಳೆದ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪ್ರಶ್ನೆಪತ್ರಿಕೆಗಳನ್ನು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ PDF ರೂಪದಲ್ಲಿ ಹಂಚಿಕೊಳ್ಳಲಾಗಿತ್ತು ಎಂಬ ಆರೋಪದ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಇದೇ ಹಿನ್ನೆಲೆಯಲ್ಲಿ ಮರುಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 69A ಅಡಿಯಲ್ಲಿ ದೇಶದ ಹಿತದೃಷ್ಟಿಯಿಂದ ಅಲ್ಪಾವಧಿಗೆ ಮಾತ್ರ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಪರೀಕ್ಷೆಯ ಪಾರದರ್ಶಕತೆ ಕಾಪಾಡುವುದು ಹಾಗೂ ಪ್ರಾಮಾಣಿಕ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸುವುದು ಈ ಕ್ರಮದ ಮುಖ್ಯ ಉದ್ದೇಶ ಎಂದು ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಟೆಲಿಗ್ರಾಮ್‌ನಲ್ಲಿ ‘ಪೇಪರ್ ಲೀಕ್ಡ್ NEET’, ‘ರೀ-NEET 2026’, ‘ರೀ-NEET ಮಾಫಿಯಾ’ ಸೇರಿದಂತೆ ಹಲವು ಅನುಮಾನಾಸ್ಪದ ಚಾನೆಲ್‌ಗಳು ಸಕ್ರಿಯವಾಗಿದ್ದವು ಎನ್ನಲಾಗಿದೆ. ಈ ಚಾನೆಲ್‌ಗಳ ಮೂಲಕ ಸುಳ್ಳು ಮಾಹಿತಿ ಹಾಗೂ ವದಂತಿಗಳನ್ನು ಹರಡುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕ ನಿರ್ಬಂಧ ಅಗತ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈಗ ಟೆಲಿಗ್ರಾಮ್ ಸಂಸ್ಥೆ ನಿರ್ಬಂಧ ತೆರವುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ತೀರ್ಪಿನತ್ತ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ವಲಯದ ಗಮನ ನೆಟ್ಟಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?