LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ‘PSI’ ಆತ್ಮಹತ್ಯೆ , ಕಾರಣ ನಿಗೂಢ.!

ಕಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿ ವಾಸವಾಗಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಸಿಬಿಐ) ಬಸವರಾಜ್ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಘಟನೆ ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಆರ್‌.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಪಿಎಸ್‌ಐ ಬಸವರಾಜ್ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!