LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯದ ಸರ್ಕಾರಿ PU ಕಾಲೇಜುಗಳಲ್ಲಿ 814 ಉಪನ್ಯಾಸಕರ ನೇರ ನೇಮಕ : 'KEA' ಇಂದ ಶೀಘ್ರ ಅಧಿಸೂಚನೆ!

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ಶಾಲಾ ಶಿಕ್ಷಣ ಇಲಾಖೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಉಳಿಕೆ ಮೂಲ ವೃಂದದ (Residual Parent Cadre) 778 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದ (KK Cadre) 36 ಹುದ್ದೆಗಳು ಸೇರಿವೆ. ಸರ್ಕಾರದ ಹೊಸ ಆದೇಶದಂತೆ ಹಿಂದೆ ನೀಡಲಾಗಿದ್ದ ಅನುಮತಿಯನ್ನು ಮರುವರ್ಗೀಕರಿಸಿ, ವಿಷಯವಾರು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ: ಈ ಪ್ರಮುಖ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪಾರದರ್ಶಕ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲಿದೆ. ಸರ್ಕಾರದ ತಿದ್ದುಪಡಿ ನಿಯಮಗಳ ಅನ್ವಯ ಕೆಇಎ ಸಂಸ್ಥೆಯನ್ನು ‘ಆಯ್ಕೆ ಪ್ರಾಧಿಕಾರ’ವನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಆರಂಭಿಕ ಮತ್ತು ಕೊನೆಯ ದಿನಾಂಕ, ಪರೀಕ್ಷಾ ವಿಧಾನ, ವಯೋಮಿತಿ ಹಾಗೂ ಅರ್ಹತೆಗಳ ಕುರಿತು ವಿಸ್ತೃತ ಮಾಹಿತಿಯನ್ನು ಒಳಗೊಂಡ ಅಧಿಕೃತ ಅಧಿಸೂಚನೆಯನ್ನು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಿದೆ.

9 ಮತ್ತು 10ನೇ ತರಗತಿಗಳಿಗೂ ಬೋಧನೆ ಕಡ್ಡಾಯ: ಸರ್ಕಾರದ ಹೊಸ ತಿದ್ದುಪಡಿ ನಿಯಮಾವಳಿಗಳ ಪ್ರಕಾರ, ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಪದವಿ ಪೂರ್ವ ಉಪನ್ಯಾಸಕರಿಗೆ ಹೊಸ ಷರತ್ತೊಂದನ್ನು ವಿಧಿಸಲಾಗಿದೆ. ಅದರಂತೆ, ಅಗತ್ಯಬಿದ್ದಲ್ಲಿ ಈ ಉಪನ್ಯಾಸಕರು ಪ್ರೌಢಶಾಲಾ ಹಂತದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೂ ಪಾಠ-ಪ್ರವಚನ ಮಾಡಲು ಸಿದ್ಧರಿರಬೇಕಾಗುತ್ತದೆ ಎಂದು ನೇಮಕಾತಿ ಸೂಚನೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ವಾಣಿಜ್ಯಶಾಸ್ತ್ರ ಮತ್ತು ಇಂಗ್ಲಿಷ್‌ನಲ್ಲಿ ಅತಿ ಹೆಚ್ಚು ಹುದ್ದೆಗಳು: ವಿಷಯವಾರು ಹುದ್ದೆಗಳ ವಿವರವನ್ನು ನೋಡುವುದಾದರೆ, ವಾಣಿಜ್ಯಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂದರೆ 150 ಹುದ್ದೆಗಳು ಖಾಲಿ ಇವೆ. ಇದಲ್ಲದೆ ಇಂಗ್ಲಿಷ್‌ನಲ್ಲಿ 145, ಗಣಕ ವಿಜ್ಞಾನದಲ್ಲಿ (Computer Science) 110, ಅರ್ಥಶಾಸ್ತ್ರದಲ್ಲಿ 90 ಹಾಗೂ ಕನ್ನಡ ವಿಷಯದಲ್ಲಿ 89 ಹುದ್ದೆಗಳು ಪ್ರಮುಖವಾಗಿ ಖಾಲಿ ಇವೆ. ಪಠ್ಯಕ್ರಮ ಮತ್ತು ಶೈಕ್ಷಣಿಕ ಅರ್ಹತೆಯ ಸಂಪೂರ್ಣ ಮಾಹಿತಿಯನ್ನು ಪಡೆಯಲು ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ನಿಯಮಿತವಾಗಿ ಭೇಟಿ ನೀಡಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?