LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಬಿಟ್ ಕಾಯಿನ್ ಹಗರಣ: SIT ಚಾರ್ಜ್ ಶೀಟ್ ಬೆನ್ನಲ್ಲೇ ಮೊಹಮ್ಮದ್ ನಲಪಾಡ್ ಗೆ ED ಸಮನ್ಸ್ ಜಾರಿ

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಮೊಹಮ್ಮದ್ ನಲಪಾಡ್ ಸೇರಿ ಇತರ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಇಡಿ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿದೆ.

ಈಗಾಗಲೇ ಇಡಿ ಅಧಿಕಾರಿಗಳು ಮೊಹಮ್ಮದ್ ನಲಪಾಡ್ ಗೆ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ ಸರ್ಕಾರ ರಚನೆಯ ಕಾರಣಗಳನ್ನು ಹೇಳಿ ನಲಪಾಡ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಮೂರನೆ ಬಾರಿಗೆ ಸಮನ್ಸ್ ನೀಡಲಾಗಿದೆ.

ಮೊಹಮ್ಮದ್ ನಲಪಾಡ್ ವಿರುದ್ಧ SIT ಚಾರ್ಜ್ ಶೀಟ್ ಸಲ್ಲಿಕೆ:
ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ಐಟಿ ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹಾಗೂ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಗರಣದ ಕಿಂಗ್ ಪಿನ್ ಶ್ರೀಕಿ, ರಾಬಿನ್ ಖಂಡೆವಾಲಾ, ಮೊಹಮ್ಮದ್ ನಲಪಾಡ್ ಸೇರಿದಂತೆ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ನಲಪಾಡ್ ಗೆ ಹಣ ಸಂದಾಯವಾಗಿರುವ ಬಗ್ಗೆ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ನಲಪಾಡ್ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ, ನಲಪಾಡ್ ಸಂಪರ್ಕದಲ್ಲಿದ. ಸ್ನೇಹಿತರ ಮೂಲಕ ನಲಪಾಡ್ ಹಣ ನಗದೀಕರಣ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಮುಂಬೈ ಮೂಲದ ಸ್ನೇಹಿತನ ಮೂಲಕ ಹವಾಲಾ ರೂಪದಲ್ಲಿ ಹಣ ನಗದೀಕರಣವಾಗಿದೆ. ಕಮಿಷನ್ ನಲ್ಲಿ ಮೊಹಮ್ಮದ್ ನಲಪಾಡ್ ಗೂ ಪಾಲು ಹೋಗಿದ್ದು ಪತ್ತೆಯಾಗಿದೆ. ಈ ವಿಚಾರವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಬಿಟ್ ಕಾಯಿನ್ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED)ದಿಂದಲೂ ತನಿಖೆ ನಡೆಯುತ್ತಿದೆ. ನಲಪಾಡ್, ಶ್ರೀಕಿ ಸೇರಿ ಕೆಲವರ ಮನೆ ಮೇಲೆ ಇಡಿ ಅಧಿಕಾರಿಗಳು ಈ ಹಿಂದೆ ದಾಳಿ ನಡೆಸಿದ್ದರು. ಶ್ರೀಕಿ, ಸುನೀಶ್ ಹೆಗ್ಡೆ, ರಾಬಿನ್ ಖಂಡೇವಾಲನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಕಸ್ಟಡಿಗೆ ಪಡೆದು ಆರೋಪಿಗಳ ವಿಚಾರಣೆ ಬಳಿಕ ನಲಪಾಡ್ ಗೂ ನೋಟಿಸ್ ಜಾರಿ ಮಾಡಿದ್ದರು.

ಎರಡು ಬಾರಿ ಇಡಿ ಅಧಿಕಾರಿಗಳು ನಲಪಾಡ್ ಗೆ ನೋಟಿಸ್ ನೀಡಿದ್ದಾರೆ. ಈಗ ಮೂರನೇ ಬಾರಿ ನೋಟಿಸ್ ಜಾರಿ ಮಾಡಿದ್ದು, ನಲಪಾಡ್ ವಿಚಾರಣೆಗೆ ಹಾಜರಾಗಲಿದ್ದಾರಾ? ಕಾದುನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?