LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKNG : ಅಕ್ಟೋಬರ್ 29ರಿಂದ ಹಾಸನಾಂಬಾ ಜಾತ್ರಾ ಮಹೋತ್ಸವ ಆರಂಭ: 12 ದಿನ ದೇವಿಯ ದರ್ಶನಕ್ಕೆ ಅವಕಾಶ

ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವವು ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಸಡಗರದಿಂದ ನಡೆಯಲಿದೆ. ಜಾತ್ರಾ ಮಹೋತ್ಸವವನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಹಾಗೂ ಪೂರ್ವಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್, ನ. 10ರವರೆಗೆ ದರ್ಶನ: ಆಶ್ವಯುಜ ಮಾಸದ ಪವಿತ್ರ ದಿನವಾದ ಅಕ್ಟೋಬರ್ 29ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಧಾರ್ಮಿಕ ವಿಧಿವಿಧಾನಗಳು ನಡೆಯುವ ಕಾರಣ ಮೊದಲ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಾರನೇ ದಿನದಿಂದ, ಅಂದರೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಒಟ್ಟು 12 ದಿನಗಳ ಕಾಲ ಭಕ್ತಾದಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ತದನಂತರ ನವೆಂಬರ್ 11ರಂದು ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತದೆ.

ಸೆಪ್ಟೆಂಬರ್ 26ಕ್ಕೆ ಪೋಸ್ಟರ್ ಹಾಗೂ ವೆಬ್‌ಸೈಟ್ ಲಾಂಚ್: ಹಾಸನಾಂಬಾ ಜಾತ್ರಾ ಮಹೋತ್ಸವದ ಪ್ರಚಾರ ಹಾಗೂ ಭಕ್ತರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಲಿದ್ದು, ವಿಶೇಷ ವೆಬ್‌ಸೈಟ್‌ಗೂ ಚಾಲನೆ ನೀಡಲಿದ್ದಾರೆ. ಪ್ರಸ್ತುತ ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವುದರಿಂದ, ಬರದ ಛಾಯೆಯ ನಡುವೆಯೂ ಅನಗತ್ಯ ಅದ್ದೂರಿತನವಿಲ್ಲದೆ ಶ್ರದ್ಧೆ ಹಾಗೂ ಸಾಂಪ್ರದಾಯಿಕ ಸಂಭ್ರಮದೊಂದಿಗೆ ಮಹೋತ್ಸವ ನಡೆಸಲು ತೀರ್ಮಾನಿಸಲಾಗಿದೆ.

ವಿವಿಧ ಸಮಿತಿಗಳ ರಚನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ: ಜಾತ್ರಾ ಮಹೋತ್ಸವದ ಯಶಸ್ವಿ ನಿರ್ವಹಣೆಗಾಗಿ ಈಗಾಗಲೇ ಹಲವು ಕಾರ್ಯಕಾರಿ ಸಮಿತಿಗಳನ್ನು ರಚಿಸಲಾಗಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಮನರಂಜನೆ ನೀಡಲು ಮತ್ತು ಸ್ಥಳೀಯ ಕಲೆ-ಸಂಸ್ಕೃತಿಯನ್ನು ಪೋಷಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಭಾಗವಾಗಿ ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ವೈಭವದ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ತಲುಪಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!