LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನ್ ಮುಲ್ ಹಾಲಿನ ಪುಡಿ ಹಗರಣ: CBI ತನಿಖೆಗೆ ಹಾಲು ಉತ್ಪಾದಕರ ಹೋರಾಟ ಸಮಿತಿ ಆಗ್ರಹ

ಮಂಡ್ಯ :  ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲಿನ ಪುಡಿ ಕಲಬೆರಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಹಾಲು ಉತ್ಪಾದಕರ ಹೋರಾಟ ಸಮಿತಿ ಕಾರ್ಯಕರ್ತರು ಶನಿವಾರ ಗೆಜ್ಜಲಗೆರೆ ಮನ್ ಮುಲ್ ಎದುರು ಬೃಹತ್ 
ಪ್ರತಿಭಟನೆ ನಡೆಸಿದರು.

ಹೋರಾಟ ಸಮಿತಿಯ ಮುಖಂಡರಾದ ಸುನಂದಾ ಜಯರಾಂ ನೇತೃತ್ವದಲ್ಲಿ ಗೆಜ್ಜಲಗೆರೆ, ಸಾದೊಳಲು, ವಳಗೆರೆಹಳ್ಳಿ, ಕುದುರಗುಂಡಿ  ಸೇರಿದಂತೆ ವಿವಿಧ ಗ್ರಾಮಗಳ ರೈತರು, ಹೈನುಗಾರರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಛೇರಿ ಮುಂಭಾಗದಿಂದ ಪಾದಯಾತ್ರೆ ಮೂಲಕ  ಮನ್ ಮುಲ್ ಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು‌.

ರಾಜ್ಯ ಸರ್ಕಾರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲಕ್ಷ್ಮಣ್ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಆಡಳಿತ ಮಂಡಳಿ, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾಕಾರರು ಆಡಳಿತ ಮಂಡಳಿ ಕಛೇರಿಗೆ ನುಗ್ಗಿ ಪ್ರತಿಭಟನೆ ನಡೆಸಲು ಮುಂದಾದರು ಪ್ರತಿಭಟನಾಕಾರರನ್ನು ಸುತ್ತುವರೆದ ಪೋಲೀಸರು ಮುಖ್ಯ ಪ್ರವೇಶದ್ವಾರದ ಮುಂಭಾಗವೇ ಪ್ರತಿಭಟನೆ ನಡೆಸಿದರು. ಈ ನಡುವೆ ರೈತ ನಾಯಕಿ ಸುನಂದಾ ಜಯರಾಂ ಹಾಗೂ ಹೋರಾಟ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದಂತ ಸುನಂದಾ ಜಯರಾಂ ಜಿಲ್ಲಾಧಿಕಾರಿ, ಮನ್ ಮುಲ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮನ್ ಮುಲ್ ನಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಾಲಿನ ಪುಡಿ ಹಗರಣದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರೈತ ನಾಯಕಿ ಸುನಂದಾ ಜಯರಾಂ ಹಾಲಿನ ಪುಡಿ ಕಲಬೆರಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಈ ಹಗರಣದಲ್ಲಿ 100 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ಇದರಲ್ಲಿ ಭಾಗಿಯಾಗಿರುವ ಭ್ರಷ್ಟ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯನ್ನು ತಕ್ಷಣವೇ ರದ್ದು ಪಡಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಹಾಲು ಒಕ್ಕೂಟದಲ್ಲಿ ಒಂದಾದ ಮೇಲೆ ಒಂದರಂತೆ ಹಗರಣಗಳು ನಡೆಯುತ್ತಿವೆ. ಈ ಹಿಂದೆ ಹಾಲು - ನೀರು ಹಗರಣ, ನೇಮಕಾತಿ, ಕಾನೂನು ಬಾಹಿರ ಆಡಳಿತ ನಡೆಯುತ್ತಿದ್ದು, ಹೀಗಾಗಿ ಈ ಎಲ್ಲಾ ಹಗರಣಗಳ ಸತ್ಯಾ ಸತ್ಯತೆ ಹೊರ ಬರಬೇಕಾದರೆ ಸಿಬಿಐ ತನಿಖೆಯಿಂದ ಮಾತ್ರ ಎಂದು ಆಗ್ರಹಿಸಿದರು.

ಈಗಾಗಲೇ ಟ್ಯಾಂಕರ್ ಹಗರಣವನ್ನು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ವಹಿಸಿ 4 ವರ್ಷಗಳಾಗಿವೆ ಆದರೆ, ಇಲ್ಲಿಯವರೆಗೂ ತನಿಖೆ ಮುಗಿದು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಗರಣವನ್ನು ರಾಜ್ಯ ಸರ್ಕಾರವೇ ತನಿಖೆಗೆ ಒಳಪಡಿಸಿದರೆ ಈ ಪ್ರಕರಣ ಹಳ್ಳಹಿಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಹೀಗಾಗಿ ಈ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ರೈತ ಸಂಘದ ಕಾರ್ಯಕರ್ತರು ಒತ್ತಾಯಿಸಿದರು‌.

ಇಷ್ಟೆಲ್ಲ ಹಗರಣ ಕಂಡು ಬಂದರೂ ಸಹ ಜಿಲ್ಲೆಯ ಶಾಸಕರು, ಸಚಿವರು ಹಾಗೂ ಸಂಸದರು ಸೇರಿದಂತೆ ಈ ಪ್ರಕರಣದ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಈ ಕೂಡಲೇ ಜಿಲ್ಲೆಯ ಜನಪ್ರತಿನಿಧಿಗಳು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುವ ಮೂಲಕ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹ ಮಾಡಿದರು.

ಈ ವೇಳೆ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕುದುರಗುಂಡಿ ನಾಗರಾಜ್, ಜಯರಾಂ, ಮೋಹನ್, ವೀರೇಶ್, ಪ್ರಭು, ಶಂಕರ್, ರಾಮಲಿಂಗಯ್ಯ, ರವಿ ಹಾಗೂ ಹಾಲು ಉತ್ಪಾದಕರ ಹೋರಾಟ ಸಮಿತಿ ಕಾರ್ಯಕರ್ತರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!