LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ CID ನೋಟಿಸ್ ಜಾರಿ

ಬೆಳಗಾವಿ: ಬೆಳಗಾವಿಯ ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಕಂಪನಿಯ ಮಾಲೀಕ ಶಿವಾನಂದ ನೀಲಣ್ಣವರ, ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಸಂಗ್ರಹಿಸಿದ ಹಣದ ಒಂದು ಭಾಗವನ್ನು ಸನ್ನಿ ಲಿಯೋನ್ ಸೇರಿದಂತೆ ಹಲವು ನಟ-ನಟಿಯರಿಗೆ ವರ್ಗಾವಣೆ ಮಾಡಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಸಾರ್ವಜನಿಕರ ಹಣವನ್ನು ಸಿನಿಮಾ ನಟರಿಗೆ ನೀಡಿರುವ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಸನ್ನಿ ಲಿಯೋನ್ ಸೇರಿದಂತೆ ಹಣ ಪಡೆದ ಇತರೆ ನಟ-ನಟಿಯರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಪಿ ಶಿವಾನಂದ ನೀಲಣ್ಣವರ ಒಟ್ಟು 40,700 ಹೂಡಿಕೆದಾರರಿಂದ ಬರೊಬ್ಬರಿ 2,400 ಕೋಟಿ ರೂಪಾಯಿಗಳನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿದ್ದಾನೆ. ಇದರಲ್ಲಿ ಸುಮಾರು 10,000 ಹೂಡಿಕೆದಾರರು ನೆರೆಯ ಮಹಾರಾಷ್ಟ್ರ ರಾಜ್ಯದವರಾಗಿದ್ದಾರೆ. ಸಂಗ್ರಹಿಸಿದ ಭಾರಿ ಮೊತ್ತದಲ್ಲಿ 540 ಕೋಟಿ ರೂಪಾಯಿಗಳನ್ನು ಆತ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿ, ಅದರಲ್ಲಿ 170 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾನೆ. ಈ ವಂಚನೆಯ ಜಾಲವನ್ನು ನಡೆಸಲು ಆತ ಸುಮಾರು 30 ಬ್ಯಾಂಕ್ ಖಾತೆಗಳನ್ನು ಬಳಸಿದ್ದು, ಕೇವಲ ಒಂದು ಖಾತೆಯಲ್ಲೇ 36,200 ಪುಟಗಳಷ್ಟು ದೀರ್ಘವಾದ ವಹಿವಾಟಿನ ಇತಿಹಾಸ ಇದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಅಚ್ಚರಿಯ ವಿಷಯವೆಂದರೆ, ಆರೋಪಿಯನ್ನು ಪೊಲೀಸರು ಬಂಧಿಸಿದ ನಂತರವೂ ಜನರು ಆತನ ಕಂಪನಿಯಲ್ಲಿ ಹೂಡಿಕೆ ಮಾಡುತ್ತಲೇ ಇದ್ದಾರೆ. ಬಂಧನದ ಕೇವಲ 20 ದಿನಗಳ ಅವಧಿಯಲ್ಲೂ ವಂಚಕನ ಖಾತೆಗೆ ಸಾರ್ವಜನಿಕರು ಮತ್ತೆ 5 ಕೋಟಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!