LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'EVM' ತಂದಿದ್ದು ನಿಮ್ಮಪ್ಪ, ನಿಮ್ಮಪ್ಪನ ಹೆಸರೇ ಮರೆತೋಯ್ತ? : ರಾಹುಲ್ ಗಾಂಧಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಸಂವಿಧಾನಕ್ಕೆ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಮಂಡಲದ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸತ್ತಿನ ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ ಕಳಂಕ ತರುತ್ತಿದ್ದಾರೆ. ಎಲ್ಲವೂ ತಿಳಿದಿದ್ದರೂ ಅವರು ಈ ರೀತಿ ಮಾಡುತ್ತಿದ್ದು, ಈ ಬಗ್ಗೆ ದೇಶದ ಜನರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್) ಒಂದು 'ಬ್ಲಾಕ್ ಬಾಕ್ಸ್' ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕಡಾಖಂಡಿತವಾಗಿ ತಿರುಗೇಟು ನೀಡಿದ ಆರ್. ಅಶೋಕ್, "ಇವಿಎಂ ತಂದಿದ್ದೇ ನಿಮ್ಮಪ್ಪ. ನಿಮಗೇನು ನಿಮ್ಮಪ್ಪನ ಹೆಸರೇ ಮರೆತು ಹೋಗಿದೆಯಾ? ನಿಮ್ಮ ತಂದೆಯ ಮೇಲೆಯೇ ನಿಮಗೆ ನಂಬಿಕೆ ಇಲ್ವಾ?" ಎಂದು ಪ್ರಶ್ನಿಸಿದರು. ಅಲ್ಲದೆ, "ಧೈರ್ಯವಿದ್ದರೆ ಕಾಂಗ್ರೆಸ್ ನಾಯಕರು ಚುನಾವಣೆಯನ್ನು ಬಹಿಷ್ಕರಿಸಿ ಮತ್ತೆ ಚುನಾವಣೆ ಎದುರಿಸಲಿ" ಎಂದು ಸವಾಲು ಹಾಕಿದರು. ಕರ್ನಾಟಕ, ತೆಲಂಗಾಣ ಹಾಗೂ ಕೇರಳದಲ್ಲಿ ಕಾಂಗ್ರೆಸ್ ಹೇಗೆ ಗೆದ್ದಿತು ಎಂಬುದಕ್ಕೆ ಮೊದಲು ಉತ್ತರ ನೀಡಲಿ; ಗೆದ್ದಾಗ ಚುನಾವಣಾ ಆಯೋಗ ದೇವರು, ಸೋತಾಗ ವಿಲನ್ ಆಗುತ್ತದೆಯೇ ಎಂದು ಚಾಟಿ ಬೀಸಿದರು.

ದೇಶದ ಯಾವುದೇ ಸಾಂವಿಧಾನಿಕ ಸಂಸ್ಥೆಗಳನ್ನು ಕಾಂಗ್ರೆಸ್ ಗೌರವಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಪಾಕಿಸ್ತಾನ ಮತ್ತು ಬಾಂಗ್ಲಾದೇಶಿ ಮೂಲದವರ ಮತಗಳಿಗಾಗಿ ಕಾಂಗ್ರೆಸ್ ಹಿಂಬಾಗಿಲಿನಿಂದ ಆಯೋಗವನ್ನು ತೆಗಳುವ ಕೆಲಸ ಮಾಡುತ್ತಿದೆ ಎಂದರು. ಆರ್ಟಿಕಲ್ 370 ರದ್ದು, ತ್ರಿಪಲ್ ತಲಾಕ್ ತಡೆ ಹಾಗೂ ರಾಮಮಂದಿರ ಉದ್ಘಾಟನೆಯನ್ನು ವಿರೋಧಿಸಿದ ಕಾಂಗ್ರೆಸ್, ವಂದೇ ಮಾತರಂ ಸಂಪೂರ್ಣ ಗೀತೆಯನ್ನು ಹಾಡಲು ಹಿಂಜರಿಯುತ್ತದೆ. ಶಾರುಖ್ ಖಾನ್, ಅಮೀರ್ ಖಾನ್ ಅವರಂತಹ ನಟರೇ ಮನೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುತ್ತಾರೆ. ಆದರೆ ರಾಹುಲ್ ಗಾಂಧಿಗೆ ದೇಶದ ಸಂಸ್ಕೃತಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಅವರು ಒಳ್ಳೆಯ ಮುಸ್ಲಿಮರನ್ನು ನೋಡಿ ಕಲಿಯಬೇಕು ಎಂದು ಕಿಡಿಕಾರಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್