LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

FACT CHECK : ಅಕ್ಟೋಬರ್ 2ರಂದು ದೇಶಾದ್ಯಂತ ‘No UPI Day’ ? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು

ನವದೆಹಲಿ: ಅಕ್ಟೋಬರ್ 2ರಂದು ದೇಶಾದ್ಯಂತ ‘ನೋ ಯುಪಿಐ ಡೇ’ (No UPI Day) ಆಚರಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗಾಂಧಿ ಜಯಂತಿಯಂದು ಆನ್ಲೈನ್ ಪಾವತಿಗಳಿಂದ ದೂರ ಇರಬೇಕು ಎಂಬ ಸಂದೇಶಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಹಾಗೂ ಗ್ರಾಹಕರಲ್ಲಿ ಗೊಂದಲ ಉಂಟಾಗಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಅಖಿಲ ಭಾರತ ವರ್ತಕರ ಒಕ್ಕೂಟ (CAIT) ಸ್ಪಷ್ಟಪಡಿಸಿದೆ.

ಹೌದು. ಅಕ್ಟೋಬರ್ 2ರಂದು ದೇಶಾದ್ಯಂತ ‘ನೋ ಯುಪಿಐ ಡೇ’ (No UPI Day) ಆಚರಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ವ್ಯಾಪಾರಿಗಳು ಹಾಗೂ ಗ್ರಾಹಕರಲ್ಲಿ ಗೊಂದಲ ಉಂಟಾಗಿದೆ. ಆದರೆ ಅಕ್ಟೋಬರ್ 2ರಂದು ‘No UPI Day’ ಆಚರಿಸುವ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ ಎಂದು ಅಖಿಲ ಭಾರತ ವರ್ತಕರ ಒಕ್ಕೂಟ (CAIT) ಸ್ಪಷ್ಟಪಡಿಸಿದೆ.

ಗಾಂಧಿ ಜಯಂತಿಯಂದು ಜನರು ಆನ್‌ಲೈನ್ ಪಾವತಿಗಳನ್ನು, ವಿಶೇಷವಾಗಿ ಯುಪಿಐ (UPI) ವಹಿವಾಟುಗಳನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಬೇಕು ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಸಂದೇಶಗಳನ್ನು ಆಧರಿಸಿ ಹಲವು ಮಂದಿ ಅಕ್ಟೋಬರ್ 2ರಂದು ಯುಪಿಐ ಸೇವೆಗಳು ಬಂದ್ ಆಗಲಿವೆ ಎಂದು ಭಾವಿಸಿದ್ದಾರೆ.

ಆದರೆ ಈ ಮಾಹಿತಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಯುಪಿಐ ಸೇವೆಗಳನ್ನು ಸ್ಥಗಿತಗೊಳಿಸುವ ಅಥವಾ ‘No UPI Day’ ಆಚರಿಸುವ ಕುರಿತು ಯಾವುದೇ ಅಧಿಕೃತ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು CAIT ತಿಳಿಸಿದೆ.

 ಅಕ್ಟೋಬರ್ 2ರಂದು ‘ನೋ ಯುಪಿಐ ಡೇ’ ಆಚರಿಸುವಂತೆ ತಮ್ಮ ಸಂಸ್ಥೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಹಾಗೂ ಈ ಕುರಿತು ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ ಎಂದು CAIT ತಿಳಿಸಿದೆ. ತಮ್ಮ ಸಂಸ್ಥೆಯ ಹೆಸರನ್ನು ಬಳಸಿಕೊಂಡು ಇಂತಹ ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಒಕ್ಕೂಟ ಖಂಡಿಸಿದೆ.

ತಮ್ಮ ಹೆಸರಿಗೆ ಇತರರ ನಿರ್ಧಾರ ಆಪಾದಿಸಬೇಡಿ

ಮರ್ಚಂಟ್ ಡಿಸ್ಕೌಂಟ್ ರೇಟ್ (MDR) ವಿಚಾರವಾಗಿ ಕೆಲವು ಪ್ರಾದೇಶಿಕ ಸಂಘಟನೆಗಳು ಅಥವಾ ಇತರ ವ್ಯಾಪಾರ ಸಂಘಗಳು ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ಅಥವಾ ಅಭಿಯಾನಕ್ಕೆ ಕರೆ ನೀಡಿರಬಹುದು ಎಂದು CAIT ತಿಳಿಸಿದೆ. ಅಂತಹ ಸಂಘಟನೆಗಳ ನಿರ್ಧಾರಗಳನ್ನು CAITಗೆ ಸಂಬಂಧಿಸಿದಂತೆ ಬಿಂಬಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದೆ.

ಈ ರೀತಿಯ ಯಾವುದೇ ಪ್ರತಿಭಟನೆಯಲ್ಲಿ CAIT ಭಾಗವಹಿಸುತ್ತಿಲ್ಲ. CAIT ‘No UPI Day’ ಆಚರಣೆಗೆ ಕರೆ ನೀಡಿದೆ ಎಂಬ ಸುದ್ದಿ ಕೂಡ ಸಂಪೂರ್ಣ ತಪ್ಪು ಎಂದು ತಿಳಿಸಲಾಗಿದೆ.

ಅಧಿಕೃತ ಮಾಹಿತಿಯನ್ನೇ ನಂಬಿ

ವದಂತಿಗಳು ಮತ್ತು ದೃಢೀಕರಿಸದ ಮಾಹಿತಿಯನ್ನು ನಂಬಿ ಸಾರ್ವಜನಿಕರು ಗೊಂದಲಕ್ಕೊಳಗಾಗಬಾರದು ಎಂದು CAIT ಮನವಿ ಮಾಡಿದೆ. ಯಾವುದೇ ಸುದ್ದಿ ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮೊದಲು ಅಧಿಕೃತ ಮೂಲಗಳಿಂದ ಮಾಹಿತಿ ಪರಿಶೀಲಿಸಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೂ ಒಕ್ಕೂಟ ಮನವಿ ಮಾಡಿದೆ.

ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯ ಬೆಳವಣಿಗೆಗೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದು CAIT ತಿಳಿಸಿದೆ.

ಹೀಗಾಗಿ, ಅಕ್ಟೋಬರ್ 2ರಂದು ದೇಶಾದ್ಯಂತ UPI ಸೇವೆಗಳು ಬಂದ್ ಆಗಲಿವೆ ಅಥವಾ ‘No UPI Day’ ಆಚರಿಸಲಾಗುತ್ತದೆ ಎಂಬ ಸುದ್ದಿ ಸದ್ಯಕ್ಕೆ ಆಧಾರರಹಿತವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?