LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಸೈಮನ್ ಗೋ ಬ್ಯಾಕ್’ ಮಾದರಿಯಲ್ಲಿ ‘GK ಗೋ ಬ್ಯಾಕ್’; ರೇವಂತ್ ರೆಡ್ಡಿ ಹೊಸ ಘೋಷಣೆ

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳಿದ್ದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ದೆಹಲಿ ಪೊಲೀಸರು ಬುಧವಾರ (ಅ.7) ತಡೆದಿದ್ದಾರೆ. ಈ ವೇಳೆ ಅವರೊಂದಿಗೆ ತೆಲಂಗಾಣದ ಕಂದಾಯ, ವಸತಿ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಕೂಡ ಇದ್ದರು.

ಇದಕ್ಕೂ ಮೊದಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪೊಲೀಸರು ಹಲವು ನಾಯಕರನ್ನು ವಶಕ್ಕೆ ಪಡೆದಿದ್ದರು. ರಾಹುಲ್ ಗಾಂಧಿ ಅವರನ್ನು ಮತ್ತೆ ವಶಕ್ಕೆ ಪಡೆದಿರುವುದನ್ನು ರೇವಂತ್ ರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ.

https://x.com/ANI/status/2107848425425473702

ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿರುವುದು ಕಾನೂನುಬಾಹಿರ ಕ್ರಮ ಎಂದು ರೇವಂತ್ ರೆಡ್ಡಿ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರ ನಾಯಕತ್ವ ಮತ್ತು ಜನಪ್ರಿಯತೆ ಹೆಚ್ಚುತ್ತಿರುವುದರಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆತಂಕಗೊಂಡಿದೆ ಎಂದು ಅವರು ಹೇಳಿದ್ದಾರೆ.

“ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ‘ಸೈಮನ್ ಗೋ ಬ್ಯಾಕ್’ ಎಂಬ ಘೋಷಣೆ ಮೊಳಗಿತ್ತು. ಅದೇ ರೀತಿಯಲ್ಲಿ ಇಂದು ‘ಜ್ಞಾನೇಶ್ ಕುಮಾರ್ ಗೋ ಬ್ಯಾಕ್’ ಎಂಬ ಹೋರಾಟ ನಡೆಯುತ್ತಿದೆ. ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯಬೇಕು” ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂವಿಧಾನ ಮತ್ತು ಮತದಾನದ ಹಕ್ಕುಗಳನ್ನು ರಕ್ಷಿಸುವ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಬಂಧನ, ಜೈಲು ಅಥವಾ ಪೊಲೀಸ್ ಕ್ರಮಗಳ ಮೂಲಕ ಕಾಂಗ್ರೆಸ್‌ನ ಹೋರಾಟವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

‘ಇದು ಭಯದ ಪ್ರತಿಕ್ರಿಯೆ’ ಎಂದ ರಾಹುಲ್

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಸ್‌ನಿಂದಲೇ ಮಾತನಾಡಿದ್ದಾರೆ.

ಅಮಿತ್ ಶಾ, ನರೇಂದ್ರ ಮೋದಿ, ಜ್ಞಾನೇಶ್ ಕುಮಾರ್ ಹಾಗೂ ಮೋಹನ್ ಭಾಗವತ್ ಏನೇ ಮಾಡಿದರೂ ಅವರನ್ನು ಕಾನೂನಿನ ಮುಂದೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ತಮ್ಮ ವಿರುದ್ಧ ಹಾಗೂ ಪ್ರತಿಭಟನಾಕಾರರ ವಿರುದ್ಧ ಕೈಗೊಂಡಿರುವ ಕ್ರಮ ಭಯದಿಂದ ಬಂದ ಪ್ರತಿಕ್ರಿಯೆ ಎಂದು ಅವರು ಆರೋಪಿಸಿದ್ದಾರೆ. ಬಳಿಕ ರಾಹುಲ್ ಗಾಂಧಿ ಅವರನ್ನು ಮತ್ತೊಂದು ಬಸ್‌ಗೆ ಸ್ಥಳಾಂತರಿಸಿ ಬರಾಖಂಬಾ ರಸ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ರಾಹುಲ್, ಪ್ರಿಯಾಂಕಾ ವಿರುದ್ಧ ಎಫ್‌ಐಆರ್

ಇದೇ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಅ.6ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆ ವೇಳೆ ಆಕಾಶವಾಣಿ ಭವನದ ಆವರಣಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರಿಗೆ ಬಂದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಅವರೊಂದಿಗೆ ಇದ್ದ ಇತರ ಸಂಸದರು ಅನುಮತಿ ಇಲ್ಲದೆ ಆಕಾಶವಾಣಿ ಭವನದ ಆವರಣ ಪ್ರವೇಶಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದೆ. ಪ್ರತಿಭಟನೆ ಮತ್ತು ಪೊಲೀಸರ ಕ್ರಮದ ಕುರಿತು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!