LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS: ರಾಜ್ಯದಲ್ಲಿ 'ಸರ್ಕಾರಿ ಶಾಲೆ'ಗಳಲ್ಲಿ ಓದಿದವರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರಾಜ್ಯದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಭರ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿ ನಿಯಮಾವಳಿಗೆ ಮಹತ್ವದ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

2006ರ 'ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳಿಗೆ ಅಭ್ಯರ್ಥಿಗಳ ಆಯ್ಕೆ ನಿಯಮಾವಳಿ'ಗೆ ತಿದ್ದುಪಡಿ ತರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ನೀಡಲಾಗುವ ಒಟ್ಟು ಶೇಕಡಾ 15ರಷ್ಟು ಗ್ರಾಮೀಣ ಮೀಸಲಾತಿಯಲ್ಲಿ ಆಂತರಿಕ ವರ್ಗೀಕರಣ (ಹಾರಿಜಾಂಟಲ್ ಮೀಸಲಾತಿ) ಮಾಡಲು ಪ್ರಸ್ತಾಪಿಸಲಾಗಿದೆ.

ಮೀಸಲಾತಿಯ ಆಂತರಿಕ ವರ್ಗೀಕರಣದ ವಿವರ

ಹೊಸ ಕರಡು ನಿಯಮಾವಳಿಗಳ ಪ್ರಕಾರ, ಗ್ರಾಮೀಣ ಅಭ್ಯರ್ಥಿಗಳಿಗೆ ಲಭ್ಯವಿರುವ ಒಟ್ಟು ಶೇಕಡಾ 15ರಷ್ಟು ಸರ್ಕಾರಿ ಸೀಟುಗಳನ್ನು ಎರಡು ಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವಾಗಿ, ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಿರ್ವಹಿಸಲ್ಪಡುವ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡಾ 7.5ರಷ್ಟು ಸೀಟುಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗುತ್ತದೆ. ಎರಡನೇ ಭಾಗವಾಗಿ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿರುವ ಇತರೆ ಶಿಕ್ಷಣ ಸಂಸ್ಥೆಗಳು ಅಥವಾ ಖಾಸಗಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಉಳಿದ ಶೇಕಡಾ 7.5ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದಿರೆ ಅವರ ಹೆಸರಿನಲ್ಲಿ ಸೆಪ್ಟೆಂಬರ್ 5, 2026 ರಂದು ಈ ಕರಡು ಅಧಿಸೂಚನೆ ಹೊರಬಿದ್ದಿದೆ. ಈ ತಿದ್ದುಪಡಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳು ಇದ್ದಲ್ಲಿ, ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ಒಳಗಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಕ್ಷೇಪಣೆ ಅಥವಾ ಸಲಹೆಗಳನ್ನು ಕಳುಹಿಸಲು ಬಯಸುವವರು 'ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ, ಎಂ.ಎಸ್. ಬಿಲ್ಡಿಂಗ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560 001' ಈ ವಿಳಾಸಕ್ಕೆ ತಲುಪಿಸಬೇಕಾಗಿದೆ. ನಿಗದಿತ ಅವಧಿಯಲ್ಲಿ ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿಯಮಾವಳಿಗಳನ್ನು ಸರ್ಕಾರ ಅಧಿಕೃತವಾಗಿ ಜಾರಿಗೆ ತರಲಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...

news_1788783854_1_378.webp

 

news_1788783854_0_110.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!